ತುಮಕೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇಂದು ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸಿದರು.
ತಿಪಟೂರಿನ ಕಲ್ಪತರು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ರೈತರು ಹಾಗೂ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಚಿವ ವಿ.ಸೋಮಣ್ಣ ಮುಂದೆ ಪ್ರಸ್ತಾಪಿಸಿದರು. ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ದೂರನ್ನು ಸಚಿವರ ಬಳಿ ಹೇಳಿಕೊಂಡರು.
ಸ್ಥಳದಲ್ಲಿ ಇದ್ದ ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳನ್ನು ಸಚಿವ ಸೋಮಣ್ಣ ತರಾಟೆಗೆ ತೆಗೆದುಕೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q