ತುಮಕೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಡಿ.ರಾಂಪುರ ಗ್ರಾಮದ ಬಳಿ ನಡೆಯುತ್ತಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಅಧಿಕಾರಿಗಳ ಬಳಿ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಹಾಜರಿದ್ದ ಲಿಂಕೆನಲ್ ವಿರೋಧಿ ಹೋರಾಟಗಾರರು ಹಾಗೂ ರೈತರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಈ ವೇಳೆ ಅವರನ್ನು ಸಮಾಧಾನಪಡಿಸಿದ ಸಚಿವ ಸೋಮಣ್ಣ ಅಧಿಕಾರಿಗಳ ಬಳಿ ವಿಸ್ತೃತ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ರೈತ ಮುಖಂಡರು ಹಾಜರಿದ್ದರು.
ಸ್ಥಳ ಪರಿಶೀಲನೆ:
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಡಿ ರಾಂಪುರ ಗ್ರಾಮದ ಬಳಿ ನಡೆಯುತ್ತಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ವಿವಾದಿತ ಕಾಮಗಾರಿಯ ಕುರಿತು ಸ್ಥಳ ಪರಿಶೀಲನೆ ನಡೆಸಿದರು.
ತುಮಕೂರು ಜಿಲ್ಲೆಗೆ ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದಿಂದ ಹರಿದು ಬರುತ್ತಿರುವ ನೀರಿನ ಚಾನಲ್ ಅನ್ನು ಕೂಡ ವೀಕ್ಷಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW