ತುಮಕೂರು: ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮವಣ್ಣ ಅವರಿಗೆ ತುಮಕೂರು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ನೀಡಲಾಗಿದ್ದ ಹಳೆಯ ಪರಿವೀಕ್ಷಣಾ ಕಟ್ಟಡವನ್ನು ದುರಸ್ತಿಗೊಳಿಸಿ ಕಚೇರಿಯನ್ನಾಗಿ ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಅಲ್ಲದೆ ಸಚಿವ ಸೋಮಣ್ಣ ಅವರಿಗೆ ಕಚೇರಿಗೆ ಉಪಯೋಗಕ್ಕೆ ನೀಡಲು ನೀಡಲಾಗಿದ್ದ, ಅನುಮೋದನೆಯನ್ನು ಹಿಂಪಡೆಯಲಾಗಿದೆ ಎಂದು ಆಗಸ್ಟ್ 16 ರಂದು ಹೊರಡಿಸಲಾಗಿರುವ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಆಗಸ್ಟ್ ೩ರಂದು ಸರಕಾರದ ಅಧೀನ ಕಾಯದರ್ಶಿ ಎಂ.ಜಿ. ರಾಜಶೇಖರ್ ಹೊರಡಿಸಿರುವ ಆದೇಶ ಪತ್ರದಲ್ಲಿ ವಿ. ಸೋಮಣ್ಣ ಅವರ ಅಧಿಕಾರಾವಧಿ ಮುಗಿಯುವವರೆಗೆ ಕಚೇರಿ ಉಪಯೋಗಕ್ಕಾಗಿ ನೀಡಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q