ಬೆಂಗಳೂರು: ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದರೂ ಕೇಂದ್ರದಲ್ಲಿರುವ ಸಚಿವರು, ಸಂಸದರು ಮೌನವಾಗಿದ್ದಾರೆಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬುಧವಾರ ಟ್ವಿಟರ್ ನಲ್ಲಿ ನಡೆದ ನಮ್ಮ ಹಕ್ಕುಗಳು ನಮ್ಮ ತೆರಿಗೆಗಳು ಕನ್ನಡಿಗರ ಅಭಿಯಾನದ ಕುರಿತ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಅವರು ಮಾತನಾಡುತ್ತಿದ್ದರು.
15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಆಗಿದೆ. 14ನೇ ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲು ಹಂಚಿಕೆ ಶೇ.4.71ಇದ್ದದ್ದು 15ನೇ ಹಣಕಾಸು ಆಯೋಗದಲ್ಲಿ ಶೇ.3.64ಕ್ಕೆ ಕಡಿತ ಮಾಡಿಬಿಟ್ಟರು. ಅಂದರೆ ಶೇ.1.07 ನಮಗೆ ಕಡಿತ ಆಗಿ ಇದರಿಂದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 5 ವರ್ಷದಲ್ಲಿ ದೊಡ್ಡ ಹೊಡೆತ ಬಿದ್ದಿದೆ. ರಾಜ್ಯಕ್ಕೆ 1,87000 ಕೋಟಿ ನಷ್ಟ ಆಗಿದೆ ಎಂದರು.
ನಾವು ಕೊಡುವ ತೆರಿಗೆಯ 100 ರೂನಲ್ಲಿ ನಮಗೆ ವಾಪಾಸ್ ಬರೋದು ಕೇವಲ 12-13 ರೂ ಮಾತ್ರ ಎಂದು ಸಿಎಂ ಇದೇ ವೇಳೆ ಬೇಸರ ವ್ಯಕ್ತಪಡಿಸಿದರು.


