nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026
    Facebook Twitter Instagram
    ಟ್ರೆಂಡಿಂಗ್
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    • ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವವಿದ್ಯಾನಿಲಯ ಸಮಕಾಲೀನ ಜಗತ್ತಿಗೆ ಸ್ಪಂದಿಸಬೇಕು: ಪ್ರೊ.ಎಸ್.ಎ.ಬಾರಿ
    ತುಮಕೂರು March 22, 2025

    ವಿಶ್ವವಿದ್ಯಾನಿಲಯ ಸಮಕಾಲೀನ ಜಗತ್ತಿಗೆ ಸ್ಪಂದಿಸಬೇಕು: ಪ್ರೊ.ಎಸ್.ಎ.ಬಾರಿ

    By adminMarch 22, 2025No Comments2 Mins Read

    ತುಮಕೂರು: ವಿಶ್ವವಿದ್ಯಾನಿಲಯವೆಂದರೆ ಕೇವಲ ಜ್ಞಾನವನ್ನು ವರ್ಗಾಯಿಸುವ ಕೇಂದ್ರವಲ್ಲ. ಅದು ಸುತ್ತಲಿನ ಸಮಾಜ ಹಾಗೂ ರಾಷ್ಟ್ರದ ಭಾವನೆಗಳನ್ನು ಪ್ರತಿಬಿಂಬಿಸಬೇಕು. ಸಮಕಾಲೀನ ಜಗತ್ತಿನ ಅಗತ್ಯಗಳಿಗೆ ಸ್ಪಂದಿಸಬೇಕು ಎಂದು ಕುವೆಂಪು ವಿಶ್ವವಿದ್ಯಾನಿಲಯ ಹಾಗೂ ಗುಜರಾತ್‌ನ ಕೇಂದ್ರೀಯ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಸ್.ಎ.ಬಾರಿ ತಿಳಿಸಿದರು.

    ತುಮಕೂರು ವಿಶ್ವವಿದ್ಯಾನಿಲಯ ಗುರುವಾರ ಆಯೋಜಿಸಿದ್ದ 21ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ತಂತ್ರಜ್ಞಾನ ಬಹುವಾಗಿ ಬೆಳೆದಿದೆ. ನಾವೀಗ ಜಾಗತಿಕ ಮಟ್ಟದಲ್ಲೂ ಅಲ್ಲ, ಜಗತ್ತಿನಾಚೆಗಿನ ಬ್ರಹ್ಮಾಂಡದ ಕುರಿತು ಯೋಚಿಸಬೇಕಾಗಿದೆ ಎಂದರು.


    Provided by
    Provided by

    ಉನ್ನತ ಶಿಕ್ಷಣರಂಗದಲ್ಲಿ ಭಾರತದ ವಿಶ್ವವಿದ್ಯಾನಿಲಯಗಳ ಪಾತ್ರ ಏನು ಎಂದು ನಾವೀಗ ಪ್ರಶ್ನಿಸಿಕೊಳ್ಳಬೇಕಾಗಿದೆ. ದೇಶದಲ್ಲಿ 1600 ವಿಶ್ವವಿದ್ಯಾನಿಲಯಗಳಿವೆ. ಜಾಗತಿಕ ರ‍್ಯಾಂಕಿಂಗ್‌ ನಲ್ಲಿ ಶ್ರೇಷ್ಠ 100 ವಿವಿಗಳ ಪೈಕಿ ಭಾರತದ ಒಂದು ವಿಶ್ವವಿದ್ಯಾನಿಲಯವೂ ಇಲ್ಲದಿರುವುದು ಯೋಚಿಸಬೇಕಾದ ಸಂಗತಿ ಎಂದರು.

    ಸಾಮಾನ್ಯರಂತೆ ಇರುವ ವಿದೇಶಿ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು ನೊಬೆಲ್ ಪ್ರಶಸ್ತಿ ಪಡೆದುಕೊಳ್ಳುತ್ತಾರೆ. ಏಕೆಂದರೆ ನೈಜ ಹೊಸ ಸಂಶೋಧನೆಗಳನ್ನು ಕೈಗೊಳ್ಳುತ್ತಾರೆ. ನಮ್ಮಲ್ಲಿ ಮಾಡಿದ ಸಂಶೋಧನೆಗಳದ್ದೇ ಪುನರಾವರ್ತನೆ ನಡೆಯುತ್ತದೆ. ಇದರಿಂದಾಗಿ ಭಾರತದ ವಿವಿಗಳಲ್ಲಿರುವ ಪ್ರಾಧ್ಯಾಪಕರಿಗೆ ನೊಬೆಲ್ ಪ್ರಶಸ್ತಿಗಳು ಬರುತ್ತಿಲ್ಲ ಎಂದರು.

    ಇಂದು ಮಾಹಿತಿ ಎಲ್ಲೆಡೆ ಲಭ್ಯವಿದೆ. ವಿದ್ಯಾರ್ಥಿಗಳು ತರಗತಿಗಳಲ್ಲೇ ಎಲ್ಲವನ್ನು ತಿಳಿದುಕೊಳ್ಳುವ ಅನಿವಾರ್ಯತೆ ಇಲ್ಲ. ವಿಜ್ಞಾನ ಮತ್ತು ತಂತ್ರಜ್ಞಾನ, ಸಾಮಾಜಿಕ ಅಭಿವೃದ್ಧಿ, ಆರ್ಥಿಕತೆ ಮೊದಲಾದ ರಂಗಗಳಲ್ಲಿ ನಮ್ಮನ್ನು ನಾವು ಸ್ವಾವಲಂಬಿಗಳನ್ನಾಗಿ ಮಾಡುವ ಶಿಕ್ಷಣ ನೀಡಬೇಕಾಗಿದೆ ಎಂದರು.

    ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮಾತನಾಡಿ, ನಮ್ಮ ವಿಶ್ವವಿದ್ಯಾನಿಲಯವು ಇಪ್ಪತ್ತೊಂದರ ತರುಣನಾಗಿದೆ. ಪರಿಶ್ರಮದಿಂದ ಸಾಧನೆಗಳನ್ನು ಮಾಡಬೇಕಾದ ವಯಸ್ಸು ಇದು. ಈ ವಿಶ್ವವಿದ್ಯಾನಿಲಯವನ್ನು ಜಾಗತಿಕ ಮಟ್ಟಕ್ಕೆ ಒಯ್ಯುವ ಜವಾಬ್ದಾರಿ ಎಲ್ಲ ಬೋಧಕ–ಬೋಧಕೇತರ ಸಿಬ್ಬಂದಿಗಳ ಮೇಲೆ ಇದೆ ಎಂದರು.

    ವಿಶ್ವವಿದ್ಯಾನಿಲಯ ಒಬ್ಬರಿಂದ ನಿರ್ಮಾಣವಾದದ್ದಲ್ಲ. ಹಲವರ ಪರಿಶ್ರಮ ಇದರ ಹಿಂದಿದೆ. ಹಲವು ಬಗೆಯ ಅಡೆತಡೆಗಳನ್ನು ಬದಿಗೊತ್ತಿ ನಮ್ಮ ವಿವಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

    ಹಿರಿಯ ಪ್ರಾಧ್ಯಾಪಕ ಪ್ರೊ.ಎಲ್.ಪಿ.ರಾಜು ವಿಶ್ವವಿದ್ಯಾನಿಲಯ ಸಾಗಿ ಬಂದ ದಾರಿಯ ಅವಲೋಕನ ನಡೆಸಿದರು. ಕುಲಸಚಿವೆ ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ., ಸಿಂಡಿಕೇಟ್ ಸದಸ್ಯೆ ಪ್ರಿಯದರ್ಶಿನಿ, ಹಣಕಾಸು ಅಧಿಕಾರಿ ನರಸಿಂಹಮೂರ್ತಿ, ಸಂಸ್ಥಾಪನಾ ದಿನಾಚರಣೆ ಸಮಿತಿ ಅಧ್ಯಕ್ಷ ಪ್ರೊ. ಮನೋಹರ ಶಿಂದೆ, ಸಂಚಾಲಕ ಡಾ.ಎ.ಎಂ.ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು. ವಿವಿ ಪ್ರಗತಿಪಥದ ಕುರಿತ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು. ಡಾ. ಸಿಬಂತಿ ಪದ್ಮನಾಭ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ಮಂಗಳೂರು: ಜೀವನದಲ್ಲಿ ಎದುರಾದ ಅತಿದೊಡ್ಡ ದುರಂತವನ್ನೇ ಮೆಟ್ಟಿ ನಿಂತು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ…

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.