ಮಧ್ಯಪ್ರದೇಶ: ಲೋಕಸಭಾ ಚುನಾವಣೆ ಹತ್ತಿರವಾಗುತಿದ್ದಂತೆ ರಾಜಕೀಯ ಮುಖಂಡರು ಪ್ರಚಾರಕ್ಕಾಗಿ ವಿವಿಧ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಅಂತಹದ್ದೇ ಒಂದು ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.
ಡ್ರೈನೇಜ್ ತುಂಬಿದ್ದು, ಸ್ವಚ್ಛಗೊಳಿಸದ ಕಾರಣ ದುರ್ವಾಸನೆ ಬರುತ್ತಿತ್ತು. ನೀರು ಕೂಡ ಸರಿಯಾಗಿ ಹರಿಯುತ್ತಿಲ್ಲ ಎಂದು ಹಲವು ಬಾರಿ ಗ್ವಾಲಿಯರ್ ನ ವಾರ್ಡ್-15ರ ಬಿಜೆಪಿ ಪುರಸಭಾ ಸದಸ್ಯ ದೇವೇಂದ್ರ ರಾಠೋಡ್ ದೂರಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಹೀಗಾಗಿ ಬಿಜೆಪಿ ಮುಖಂಡ ದೇವೇಂದ್ರ ಅವರೇ ಡ್ರೈನೇಜ್ ಸ್ವಚ್ಛಗೊಳಿಸಲು ಚರಂಡಿಗೆ ಇಳಿದಿದ್ದಾರೆ.
ಬಿಜೆಪಿ ಮುಖಂಡ ಡ್ರೈನೇಜ್ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಂಡಿಲ್ಲ ಹೀಗಾಗಿ ಸ್ವಂತ ನಾನೇ ಡ್ರೈನೇಜ್ ಶುಚಿಗೊಳಿಸುತ್ತೇನೆ ಎಂದು ಅವರು ತಿಳಿಸಿದರು.
ಡ್ರೈನೇಜ್ ಗೆ ಇಳಿದು ಸ್ವಚ್ಛಗೊಳಿಸುತ್ತಿರುವ ವಿಷಯ ತಿಳಿದ ನಗರಸಭೆಯ ಸಿಬ್ಬಂದಿ ಕೂಡಲೇ ಅಲ್ಲಿಗೆ ಆಗಮಿಸಿ ಸ್ವಚ್ಛಗೊಳಿಸಲು ಸಹಕರಿಸಿದರು ಎನ್ನಲಾಗಿದೆ.
ಜನರು ನನಗೆ ಮತ ನೀಡಿದ್ದಾರೆ, ಅವರ ಮತಕ್ಕೆ ಬೆಲೆ ನೀಡಬೇಕು, ಆದ್ದರಿಂದ ಯಾರೂ ಜನರ ಸಮಸ್ಯೆ ಕೇಳದ ಕಾರಣ ಡ್ರೈನೇಜ್ ಅನ್ನು ಸ್ವಚ್ಛಗೊಳಿಸಿದ್ದೇನೆ .ನಾನು ಸ್ವಚ್ಛಗೊಳಿಸಿದ ತೊಡಗಿದ ನಂತರ ನಗರಸಭೆ ನೌಕರರು ಸಹ ಬಂದು ಸ್ವಚ್ಛಗೊಳಿಸಲು ಪ್ರಾರಂಭಿಸಿದರು ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296