nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    • ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    ಕೊರಟಗೆರೆ May 1, 2026

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    By adminMay 1, 2026No Comments2 Mins Read

    ಕೊರಟಗೆರೆ: ಹಲವು ವರ್ಷಗಳಿಂದ ಸಾರ್ವಜನಿಕರ ಬಹು ನಿರೀಕ್ಷೆಯಾಗಿದ್ದ ಕೊರಟಗೆರೆ ಪಟ್ಟಣ ಪಂಚಾಯತಿ ಇದೀಗ ಪುರಸಭೆಯಾಗಿ ಮೇಲ್ದರ್ಜೆಗೇರಿರುವ ಹಿನ್ನಲೆಯಲ್ಲಿ ಪುರಸಭೆ ಕಚೇರಿಯಲ್ಲಿ ನೂತನ ನಾಮಫಲಕವನ್ನು ಅನಾವರಣಗೊಳಿಸಲಾಯಿತು. ಈ ಮೂಲಕ ಪಟ್ಟಣದ ಅಭಿವೃದ್ಧಿಗೆ ಹೊಸ ದಿಕ್ಕು ಸಿಕ್ಕಂತಾಗಿದೆ.

    ಕೊರಟಗೆರೆ ಪಟ್ಟಣ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಕನಸನ್ನ ಪಟ್ಟಣದ ಜನತೆ, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಹಲವು ವರ್ಷಗಳಿಂದ ಪುರಸಭೆ ಸ್ಥಾನಮಾನಕ್ಕಾಗಿ ಒತ್ತಾಯ ಮಾಡುತ್ತಿದ್ದು, ಇದೀಗ ಆ ಕನಸು ನನಸಾಗಿದೆ. ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರ ವಿಶೇಷ ಒತ್ತಾಸೆ ಮತ್ತು ಪ್ರಯತ್ನದಿಂದ ಕೊರಟಗೆರೆ ಪುರಸಭೆಯಾಗಿ ಮೇಲ್ದರ್ಜೆಗೇರಿದೆ.

    ಪುರಸಭೆ ಸ್ಥಾನಮಾನದಿಂದ ಪಟ್ಟಣದ ರಸ್ತೆ, ಕುಡಿಯುವ ನೀರು, ಒಳಚರಂಡಿ, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಹರಿದು ಬರಲಿದ್ದು, ಕೊರಟಗೆರೆ ಸಮಗ್ರ ಅಭಿವೃದ್ಧಿಯತ್ತ ಹೆಜ್ಜೆ ಇಡುವ ಅವಕಾಶ ಒದಗಿ ಬಂದಿದೆ.

    ಈ ಸಂದರ್ಭದಲ್ಲಿ ₹8 ಲಕ್ಷ ವೆಚ್ಚದಲ್ಲಿ ಕಚೇರಿ ಬಳಕೆಗಾಗಿ ಅಳವಡಿಸಲಾದ ಸೋಲಾರ್ ಪ್ಲಾಂಟ್‌ನ್ನು ಉದ್ಘಾಟಿಸಲಾಯಿತು. ಪುರಸಭೆ ಕಚೇರಿಯ ಮೇಲ್ಭಾಗದಲ್ಲಿ ಸ್ಥಾಪಿಸಲಾದ ಈ ಸೋಲಾರ್ ಘಟಕದಿಂದ ಕಚೇರಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆ ಸಾಧ್ಯವಾಗಲಿದ್ದು, ವಿದ್ಯುತ್ ವ್ಯತ್ಯಯ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದ್ದು, ಇದೇ ವೇಳೆ ಈ ಯೋಜನೆಯಿಂದ ವಾರ್ಷಿಕವಾಗಿ ಸುಮಾರು ₹1.5 ಲಕ್ಷದಷ್ಟು ಉಳಿತಾಯವಾಗಲಿದ್ದು, ಹೆಚ್ಚುವರಿ ವಿದ್ಯುತ್ ಉತ್ಪಾದನೆಯಿಂದ ಆದಾಯವೂ ಲಭಿಸುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಲಾಯಿತು. ಪರಿಸರ ಸ್ನೇಹಿ ಯೋಜನೆಗಳ ಮೂಲಕ ಆಡಳಿತ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರಲು ಪುರಸಭೆ ಮುಂದಾಗಿದೆ.

    ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಶೇಷಾಧಿಕಾರಿ ಡಾ. ಕೆ. ನಾಗಣ್ಣ ಮಾತನಾಡಿ, ಪುರಸಭೆ ಸ್ಥಾನಮಾನದಿಂದ ಕೊರಟಗೆರೆ ಪಟ್ಟಣಕ್ಕೆ ಅಭಿವೃದ್ಧಿಯ ಮಹಾಪೂರ ಹರಿದು ಬರಲಿದ್ದು, ಜನರ ಕನಸು ಸಾಕಾರಗೊಂಡಿದೆ ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಹು ವರ್ಷಗಳಿಂದ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ವರ್ತಿಗೇರಿಸುವ ಪ್ರಯತ್ನದಲ್ಲಿದ್ದು ಈಗ ಸಕಾಲ ಒದಗಿಬಂದಿದೆ ಡಾ.ಜಿ ಪರಮೇಶ್ವರ್ ಒತ್ತಾಸೆಯಂತೆ ಕೊರಟಗೆರೆ ಪಟ್ಟಣ ಅಭಿವೃದ್ಧಿಯತ್ತ ಸಾಗಲಿದೆ ಎಂದರು.

    ಮಾಜಿ ಪಟ್ಟಣ ಪಂಚಾಯತಿ ಸದಸ್ಯ ಕೆ.ಆರ್. ಓಬಳರಾಜ್ ಮಾತನಾಡಿ, ಪಟ್ಟಣದ ಜನರ ಹಲವು ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಕೊರಟಗೆರೆ ಮಾದರಿ ಪಟ್ಟಣವಾಗಿ ಬೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    ಪುರಸಭೆ ಮುಖ್ಯಾಧಿಕಾರಿ ಕೆ.ಎಸ್. ಉಮೇಶ್ ಮಾತನಾಡಿ, ಸರ್ಕಾರದಿಂದ ಹೆಚ್ಚಿನ ಅನುದಾನ ತರಿಸಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಜನರ ಸಹಕಾರದೊಂದಿಗೆ ಸುಂದರ, ಸ್ವಚ್ಛ ಹಾಗೂ ಅಭಿವೃದ್ಧಿಶೀಲ ಕೊರಟಗೆರೆಯನ್ನು ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

    ಕಾರ್ಯಕ್ರಮದಲ್ಲಿ ಹೆಲ್ತ್ ಆಫೀಸರ್ ಮಹಮ್ಮದ್ ಹುಸೇನ್, ಇಂಜಿನಿಯರ್ ವಿಶಾಲಾಕ್ಷಿ ಸೇರಿದಂತೆ ಸಿಬ್ಬಂದಿ, ಸಾರ್ವಜನಿಕರು ಹಾಗೂ ಮುಖಂಡರು ಹಾಜರಿದ್ದರು. ಪುರಸಭೆ ಸ್ಥಾನಮಾನದಿಂದ ಕೊರಟಗೆರೆ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಗಿದೆ ಎಂಬ ಸಂತಸ ಎಲ್ಲೆಡೆ ವ್ಯಕ್ತವಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ತುಮಕೂರು: ಪಾವಗಡ ಪಟ್ಟಣದ ಶನಿಮಹಾತ್ಮ ದೇವಾಲಯದ ಬಳಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪಾವಗಡ…

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.