ಬೆಂಗಳೂರು: ಇದ್ಯಾಕೋ ಅತೀಯಾಯ್ತು ಅಂತ ಅನ್ನಿಸುವಷ್ಟರ ಮಟ್ಟಿಗೆ ಬಟ್ಟೆ ಇಲ್ಲದೇ ಓಡಾಡುವ ಉರ್ಫಿ ಜಾವೇದ್ ಇದೀಗ ತಮ್ಮ ಹೊಸ ಪೋಸ್ಟ್ ನ್ನು ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಎರಡು ರೆಕ್ಕೆಯಂತಹ ಬಟ್ಟೆಯಿಂದ ಎದೆ ಭಾಗವನ್ನು ಅರೆ ಬರೆಯಾಗಿ ಮುಚ್ಚಿಕೊಂಡಿರುವ ಅವರು, ಮತ್ತೊಮ್ಮೆ ನೆಟ್ಟಿಗರ ಬಾಯಿಗೆ ಆಹಾರವಾಗಿದ್ದಾರೆ.
ಮಹಿಳೆಗೆ ಸ್ವಾತಂತ್ರ್ಯದ ರೆಕ್ಕೆಗಳಿವೆ. ಅವಳು ಮಾತ್ರ ಅವುಗಳನ್ನು ಹರಡಬೇಕು, ಅವಳ ಕನಸುಗಳನ್ನು ನನಸಾಗಿಸಬೇಕು ಎಂದು ನೆಟ್ಟಿಗರೊಬ್ಬರು ಉರ್ಫಿಯ ಪರವಾಗಿ ಕಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಉರ್ಫಿ ಮಹಿಳೆಯರ ಗೌರವ ಕುಗ್ಗಿಸುವಂತೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೇ ಮಹಾರಾಷ್ಟ್ರದ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಚಿತ್ರಾ ಕಿಶೋರ್ ವಾಘ್ ಉರ್ಫಿಯ ವಿರುದ್ಧ ಕೇಸು ದಾಖಲಿಸಿದ್ದರು. ಇದಾಗಿ ಎರಡು ದಿನಗಳ ಬಳಿಕ ಉರ್ಫಿ ಇಂತಹದ್ದೊಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


