ಅಯೋಧ್ಯೆಯ ರಾಮಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಟ್ರಸ್ಟ್ ಆದೇಶ ಹೊರಡಿಸಿದೆ. ಶನಿವಾರ(ಮೇ.25) ನಡೆದ ರಾಮಮಂದಿರ ಟ್ರಸ್ಟ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ದೇವಸ್ಥಾನದಲ್ಲಿ ಸಾರ್ವಜನಿಕರು ಮೊಬೈಲ್ ಕೊಂಡೊಯ್ಯುವುದನ್ನು ಈಗಾಗಲೇ ನಿಷೇಧಿಸಲಾಗಿತ್ತು. ಆದರೆ ಈಗ ವಿಐಪಿಗಳು ಮತ್ತು ವಿವಿಐಪಿಗಳು ಮೊಬೈಲ್ ಫೋನ್ ಕೊಂಡೊಯ್ಯುವುದನ್ನೂ ನಿಷೇಧಿಸಲಾಗಿದೆ. ರಾಮಮಂದಿರ ಟ್ರಸ್ಟ್ ನ ಪದಾಧಿಕಾರಿಗಳು ಐಜಿ ಹಾಗೂ ಕಮಿಷನರ್ ಜೊತೆಗಿನ ಸಭೆಯಲ್ಲಿ ಮೊಬೈಲ್ ಫೋನ್ ಗಳನ್ನು ಸಂಪೂರ್ಣವಾಗಿ ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಟ್ರಸ್ಟ್ ಟ್ರಸ್ಟಿ ಅನಿಲ್ ಮಿಶ್ರಾ ತಿಳಿಸಿದ್ದಾರೆ. ರಾಮ ಮಂದಿರಕ್ಕೆ ಬರುವ ಭಕ್ತರ ಮೊಬೈಲ್ ಗಳನ್ನು ಇಡಲು ಸೂಕ್ತ ವ್ಯವಸ್ಥೆ ಇದೆ ಎಂದು ಟ್ರಸ್ಟಿ ಹೇಳಿದ್ದಾರೆ.
ಜನರು ತಮ್ಮ ಮೊಬೈಲ್ ಜೊತೆಗೆ ಇತರ ಬೆಲೆಬಾಳುವ ವಸ್ತುಗಳನ್ನು ಇಟ್ಟುಕೊಳ್ಳಬಹುದು. ಇಂತಹ ಪರಿಸ್ಥಿತಿಯಲ್ಲಿ ಜನರು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ದೇವಸ್ಥಾನದ ಆವರಣದಲ್ಲಿ ಸುವ್ಯವಸ್ಥೆ ಕಾಪಾಡಲು ಟ್ರಸ್ಟ್ ಗೆ ಸಹಕರಿಸಬೇಕು ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA