ಹಾಸನ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಆಕ್ಷೇಪಾರ್ಹ ಪದ ಬಳಕೆಯನ್ನು ಖಂಡಿಸಿ ಹಾಸನದಲ್ಲಿಂದು ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ ನಡೆಯಿತು.
ಹಾಸನ ನಗರದ ಹೇಮಾವತಿ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಎಡಿಜಿಪಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಎದುರು ಕೆಲಕಾಲ ಧರಣಿ ನಡೆಸಿದರು.
ಇದೇ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಎಡಿಜಿಪಿ ಚಂದ್ರಶೇಖರ್ ಅವರನ್ನು ಅಮಾನತು ಮಾಡುವಂತೆ ಒತ್ತಾಯ ಮಾಡಿದರು. ಪ್ರತಿಭಟನೆಯಲ್ಲಿ ಶಾಸಕರುಗಳಾದ ಎ.ಮಂಜು, ಸಿ.ಎನ್.ಬಾಲಕೃಷ್ಣ, ಎಚ್.ಪಿ.ಸ್ವರೂಪ್‌ಪ್ರಕಾಶ್, ಮಾಜಿ ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್ ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


