nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಜರಾಯಿ ದೇವಾಲಯಗಳ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ!
    ಕೊರಟಗೆರೆ September 9, 2025

    ಮುಜರಾಯಿ ದೇವಾಲಯಗಳ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ!

    By adminSeptember 9, 2025No Comments2 Mins Read
    koratagere

    ಕೊರಟಗೆರೆ : ಕರ್ನಾಟಕ ರಾಜ್ಯ ಸರ್ಕಾರದ ರಾಜ್ಯದ ಎಲ್ಲಾ 36,000 ಮುಜರಾಯಿ ದೇವಾಲಯಗಳಲ್ಲಿ 2025ರ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪರಿಸರ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗಾಗಿ ಈ ಕ್ರಮವನ್ನು ಘನ ಸರ್ಕಾರ ಕೈಗೊಳ್ಳಲಾಗಿದ್ದು, ಪ್ಲಾಸ್ಟಿಕ್ ಲೋಟ, ತಟ್ಟೆ, ಬ್ಯಾಗ್‌ ಗಳು ಮತ್ತು ಇನ್ನಿತರ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ನಿಯಮವನ್ನು ಉಲ್ಲಂಘಿಸಿದರೆ ದೇವಾಲಯಗಳ ಆಡಳಿತ ಮಂಡಳಿಯು ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊರಟಗೆರೆ ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ತಿಳಿಸಿದ್ದಾರೆ.

    ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಸ್ಯಕಾಶಿ, ಸಿದ್ದರ ತಪೋವನ, ಆಯುರ್ವೇದಿಕ್ ಔಷಧಿಗಳ ದಿವ್ಯತಾಣವಾದ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿಯ ದೇವಾಲಯದ  ಅವರಣದಲ್ಲಿ ಇರುವಂತಹ ಅಂಗಡಿ ಮುಂಗಟ್ಟುಗಳು,ಹೋಟೆಲ್ ಗಳು, ಟೀ ಅಂಗಡಿಗಳು, ಪೂಜಾ ಸಾಮಗ್ರಿಗಳ ಅಂಗಡಿಗಳಿಗೆ ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ಲಾಸ್ಟಿಕ್ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಅಂಗಡಿಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.


    Provided by
    Provided by

     ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆ ನಿಷೇಧ :

    ಪ್ಲಾಸ್ಟಿಕ್ ತ್ಯಾಜ್ಯದ ಅಪಾಯಗಳನ್ನು ಕಡಿಮೆ ಮಾಡಿ, ಪರಿಸರವನ್ನು ಸ್ವಚ್ಛವಾಗಿಡಲು ರಾಜ್ಯ ಸರ್ಕಾರವು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

    ಮುಜರಾಯಿ ದೇವಾಲಯಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ಸದುದ್ದೇಶ:

    ಮುಜರಾಯಿ ದೇವಾಲಯಗಳ ಆವರಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ತಡೆಗಟ್ಟುವ ಮೂಲಕ ಸ್ವಚ್ಛತೆಯನ್ನು ಕಾಪಾಡುವುದು ಇದರ ಮುಖ್ಯ ಉದ್ದೇಶವಾಗಿದೆ.

     ಯಾವ ಯಾವ. ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ..?

    ಪ್ಲಾಸ್ಟಿಕ್ ಲೋಟಗಳು,ಪ್ಲಾಸ್ಟಿಕ್ ತಟ್ಟೆಗಳು, ಪ್ಲಾಸ್ಟಿಕ್ ಬೌಲ್‌ಗಳು, ಪ್ಲಾಸ್ಟಿಕ್ ಬ್ಯಾಗ್‌ ಗಳು, ಪೂಜಾ ಕಾರ್ಯಕ್ರಮಗಳಿಗೆ ಬಳಸುವ ಪ್ಲಾಸ್ಟಿಕ್ ಬಿಂದಿಗೆ, ಜಗ್, ಮತ್ತು ಲಕೋಟೆಗಳನ್ನು ಸೇರಿದಂತೆ ಇನ್ನಿತರೆ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ.

    ನಾಗರಿಕರಿಗೆ, ಭಕ್ತರಿಗೆ ಸೂಚನೆಗಳು:

    ದೇವಾಲಯಗಳಿಗೆ ಭೇಟಿ ನೀಡುವ ಭಕ್ತಾದಿಗಳು ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಅರಿತುಕೊಂಡು, ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದನ್ನು ತಪ್ಪಿಸಬೇಕು. ಪ್ರಸಾದ ವಿತರಣೆಗೆ ಪ್ಲಾಸ್ಟಿಕ್ ತಟ್ಟೆಗಳ ಬದಲಿಗೆ ಪರ್ಯಾಯ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಲಾಗುವುದು.  ಭಕ್ತಾದಿಗಳು ಪ್ಲಾಸ್ಟಿಕ್ ಬದಲು ತಮ್ಮ ಸ್ವಂತ ಚೀಲಗಳನ್ನು ತರಲು ಪ್ರೋತ್ಸಾಹಿಸಲಾಗುತ್ತದೆ.

    ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಎ.ಜಿ.ರಾಜು, ಆರ್.ಐ.ಪ್ರತಾಪ್, ಗ್ರಾಮ ಆಡಳಿತಾಧಿಕಾರಿಗಳಾದ ರಮೇಶ್, ನಾಗಶ್ರೀ, ಮುಜರಾಯಿ ಸಿಬ್ಬಂದಿಗಳಾದ ಸೌಭಾಗ್ಯಮ್ಮ, ಸತ್ಯನಾರಾಯಣ ಸೇರಿದಂತೆ ಗ್ರಾಮಸ್ಥರು ಭಕ್ತರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ನವದೆಹಲಿ: ಭಾರತದಲ್ಲಿ ಸಮಾನತೆಯನ್ನು ಹೋಗಲಾಡಿಸಿ, ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್…

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.