nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಂತ್ರಜ್ಞಾನ ಬಳಕೆಯಿಂದ ಹಣಕಾಸಿನ ಸಾಕ್ಷರತೆ ಪ್ರಮಾಣ ಹೆಚ್ಚಳ: ಪ್ರೊ.ಟಿ.ಜಿ.ಸೀತಾರಾಮ್
    ತುಮಕೂರು December 15, 2024

    ತಂತ್ರಜ್ಞಾನ ಬಳಕೆಯಿಂದ ಹಣಕಾಸಿನ ಸಾಕ್ಷರತೆ ಪ್ರಮಾಣ ಹೆಚ್ಚಳ: ಪ್ರೊ.ಟಿ.ಜಿ.ಸೀತಾರಾಮ್

    By adminDecember 15, 2024No Comments3 Mins Read
    parameshwar

    ತುಮಕೂರು: ವಿಶ್ವದಲ್ಲಿ ಭಾರತವು ಅತೀ ದೊಡ್ಡ ಸ್ಮಾರ್ಟ್ಫೋನ್ ಉತ್ಪಾದನಾ ದೇಶವಾಗಿ ಹೊರಹೊಮ್ಮಿದೆ. ಶೇ.40ರಷ್ಟು ಯುಪಿಐ ವಹಿವಾಟು ಇದರಿಂದ ಹೆಚ್ಚಾಗಿದ್ದು, ದೇಶದ ಮೂಲೆ ಮೂಲೆಗಳಲ್ಲಿ ಡಿಜಿಟಲ್ ವಹಿವಾಟು ನಡೆಸುತ್ತಿರುವುದರಿಂದ ಹಣಕಾಸಿನ ಸಾಕ್ಷರತೆ ಪ್ರಮಾಣ ಹೆಚ್ಚಾಗಿದೆ ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಇ) ಅಧ್ಯಕ್ಷರಾದ ಪ್ರೊ. ಟಿ.ಜಿ. ಸೀತಾರಾಮ್ ತಿಳಿಸಿದರು.

    ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದ ಭಾಷಣದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದ ಸಹಾಯದಿಂದ ಪ್ರತಿಯೊಂದು ಮೂಲೆಯಲ್ಲಿಯೂ ಯುಪಿಐ ವಹಿವಾಟು ನಡೆಸಲು ಸಾಧ್ಯವಾಗುತ್ತಿದೆ. ಯುಪಿಐ ವಹಿವಾಟು, ಅತೀ ಹೆಚ್ಚು ಮೊಬೈಲ್, ಇಂಟರ್ ನೆಟ್ ಬಳಕೆದಾರರು, ಹಣಕಾಸು ಸಾಕ್ಷರತೆ ಈ ಎಲ್ಲಾ ಕಾರಣಗಳಿಂದ 2035ರ ವೇಳೆಗೆ ಭಾರತ ವಿಶ್ವಗುರುವಾಗಲಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಕೌಶಲ್ಯ ಹೊಂದಿದವರಿಗೆ ಉದ್ಯೋಗಾವಕಾಶಗಳು ಹೆಚ್ಚಿದ್ದು, ಹೊಸ ಆವಿಷ್ಕಾರಗಳಿಗೆ ಇದು ಮುನ್ನುಡಿಯಾಗಲಿದೆ ಎಂದರು.

    ಶೇ.40ರಷ್ಟು ಕೋರ್ಸ್ಗಳು ಆನ್ ಲೈನ್ ಮತ್ತು ಡಿಜಿಟಲ್ ಕಲಿಕೆ ಆಧಾರಿತವಾಗಿದ್ದು, ಶಿಕ್ಷಕರು ಕೂಡ ಅದಕ್ಕೆ ಹೊಂದಿಕೊಂಡು ಬದಲಾಗಬೇಕಿದೆ. ತಂತ್ರಜ್ಞಾನ ಅತೀ ವೇಗವಾಗಿ ಬೆಳೆಯುತ್ತಿರುವುದರಿಂದ ಶಿಕ್ಷಕರು ಸಹ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಪ್ರಯತ್ನ ಮಾಡಬೇಕು ಎಂದು ಅವರು ಸಲಹೆ ನೀಡಿದರು.

    ಭಾರತದಲ್ಲಿ 4.33 ಕೋಟಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿದ್ದು, ಅದರಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿದೆ. ಇತ್ತೀಚೆಗೆ ಮನೆಯಲ್ಲಿಯೇ ಕುಳಿತು ಆರ್ಥಿಕ ವ್ಯವಹಾರಗಳನ್ನು ನಡೆಸುತ್ತಿರುವ ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಭಾರತ ಮುಂದಿದೆ. ಇಸ್ರೋ ಸಂಸ್ಥೆಯ ಚಂದ್ರಯಾನ ಉಡಾವಣೆಯಲ್ಲಿ ಶೇ.30ರಷ್ಟಿದ್ದ ಮಹಿಳಾ ಇಂಜಿನಿಯರ್ಗಳ ಪಾತ್ರ ಪ್ರಮುಖವಾಗಿತ್ತು. ಮಹಿಳೆ ತನ್ನ ಸುತ್ತಮುತ್ತಲ ವಾತಾವರಣವನ್ನು ಬದಲಾಯಿಸುವ ಶಕ್ತಿ ಹೊಂದಿದ್ದಾಳೆ ಎಂದು ಅವರು ಅಭಿಪ್ರಾಯಪಟ್ಟರು.

    ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಗಳನ್ನು ಹೊಂದಿದ್ದ ವಿಶ್ವವಿದ್ಯಾಲಯಗಳು/ಕಾಲೇಜುಗಳು ಬಹುಶಿಸ್ತೀಯ ಕೋರ್ಸ್ ಗಳನ್ನು ಅಳವಡಿಸಿಕೊಳ್ಳುವುದರಿಂದ ಹೊಸ ಆವಿಷ್ಕಾರಗಳನ್ನು ಹೊರ ತರಬಹುದು ಎಂದರು.

    13ನೇ ಸಾಹೇ ಘಟಿಕೋತ್ಸವದಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ನಿಕಟಪೂರ್ವ ರಾಜ್ಯಪಾಲರು ಆದ ಕರ್ನಾಟಕದ ಶ್ರೀಮತಿ ಮಾರ್ಗರೆಟ್ ಆಳ್ವ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಶ್ರೀಸಿದ್ಧಾರ್ಥ ಶಿಕ್ಷಣ ಸಂಸ್ಥೆ ಪಸರಿಸಲಿ, 100ರ ಗಡಿ ದಾಟಿ ಮುನ್ನಡೆಯಲಿ. ಇದೇ ಸಂದರ್ಭದಲ್ಲಿ ಅವರು ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ತಮ್ಮ ಸ್ವಾನುಭವದ ಮೂಲಕ ವೃತ್ತಿ ಬದುಕಿನಲ್ಲಿ ವಿದ್ಯಾರ್ಥಿಗಳು ಹೇಗೆ ಇರಬೇಕು ಎಂದು ಸಲಹೆ ನೀಡಿದರು.

    ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಸವ್ಯಸಾಚಿ ಡಾ.ಜಿ.ಪರಮೇಶ್ವರ ಅವರು ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಭೋದಿಸಿದರು. ಡಾಕ್ಟರೇಟ್ ಪದವಿ-24, ಇಂಜಿನಿಯರಿಂಗ್–601 ವೈದ್ಯಕೀಯ–147,, ದಂತ ವೈದ್ಯಕೀಯ-49 ಸೇರಿದಂತೆ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ವಿತರಿಸಿದರು. ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅವರು ವಿಶ್ವವಿದ್ಯಾಲಯದ ಸಂಕ್ಷಿಪ್ತ ವರದಿಯನ್ನು ಮಂಡಿಸಿದರು.

    ಘಟಿಕೋತ್ಸವದಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯೆ ಶ್ರೀಮತಿ ಕನ್ನಿಕಾ ಪರಮೇಶ್ವರಿ, ಕುಲಸಚಿವರಾದ ಡಾ.ಎಂ.ಝೆಡ್ ಕುರಿಯನ್, ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ, ಸಾಹೇ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ನಿಯಂತ್ರಕರಾದ ಡಾ.ಗುರುಶಂಕರ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಸಾಣಿಕೊಪ್ಪ, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಪ್ರವೀಣ್ ಕುಡುವ, ಬೇಗೂರು ಶ್ರೀ ಸಿದ್ಧಾರ್ಥ ವೈದ್ಯಕೀಯ ವೈದ್ಯಕೀಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ. ದಿವಾಕರ್, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ.ಎನ್., ಉಪ ಕುಲಸಚಿವರು ಆದ ಡಾ.ಸುದೀಪ್ ಕುಮಾರ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ, ಅವಲಾನ್ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಶೌಕತ್ ಫತೇ, ಸಾಹೇ ವಿಶ್ವವಿದ್ಯಾಲಯದ ಎಲ್ಲಾ ವಿಭಾಗದ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ರ‍್ಯಾಂಕ್ ಪಡೆದವರ ಪ್ರತಿಕ್ರಿಯೆ:

    ಐ ಎಸ್ ವಿಭಾಗದಲ್ಲಿ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಆಗಿ ಹೊರಹೊಮ್ಮಿದ್ದು ಮತ್ತು ಈ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದಿರುವುದು ನನಗೆ ತುಂಬಾ ಸಂತೋಷವನ್ನು ತಂದುಕೊಟ್ಟಿದೆ. ಸಿದ್ದಾರ್ಥ ಕಾಲೇಜಿನಲ್ಲಿ ಅಧ್ಯಾಪಕರು ಹಲವಾರು ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿಕೊಡುವುದರ ಮೂಲಕ ಪ್ರೋತ್ಸಾಹಿಸಿದ ಕಾರಣ ಚಿನ್ನದ ಪದಕವನ್ನು ಪಡೆಯಲು ಸಹಾಯವಾಯಿತು ಆದ ಕಾರಣ ನನ್ನೆಲ್ಲಾ ಅಧ್ಯಾಪಕರಿಗೂ, ನನ್ನ ತಂದೆ ತಾಯಿಗಳಿಗೂ ನನ್ನ ಸ್ನೇಹಿತರಿಗೂ ನಾನು ಈ ಮೂಲಕ ಧನ್ಯವಾದಗಳನ್ನು ತಿಳಿಸುತ್ತೇನೆ.

    ಕೌಶಿಕ್, ವಿದ್ಯಾರ್ಥಿ, ಐಎಸ್ ವಿಭಾಗ, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ, ಎಂಬಿಬಿಎಸ್ ವಿದ್ಯಾರ್ಥಿಯಾಗಿ ನಾನು ಚಿನ್ನದ ಪದಕವನ್ನು ಪಡೆದಿರುವುದು ನನಗೆ ತುಂಬಾ ಸಂತೋಷವನ್ನು ತಂದುಕೊಟ್ಟಿದೆ ನನ್ನ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರಕಿದೆ. ಇದು ನನ್ನ ತಂದೆ-ತಾಯಿಗಳ ಆಶೀರ್ವಾದದ ಪ್ರತಿಫಲ.

    ರಾಹುಲ್, ವಿದ್ಯಾರ್ಥಿ, ವೈದ್ಯಕೀಯ ವಿಭಾಗ, ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ 876 ವಿದ್ಯಾರ್ಥಿಗಳಿಗೆ ಪದವಿ: 10 ಮಂದಿಗೆ ಚಿನ್ನದ ಪದಕ

    * ವೈದ್ಯಕೀಯ-01 * ದಂತ ವೈದ್ಯಕೀಯ- 02 *ಎಂಜಿನಿಯರಿಂಗ್-06 *ಎಂಸಿಎ–01
    ಸೇರಿದಂತೆ 10 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ.

    ರ‍್ಯಾಂಕ್ ವಿವರಗಳು:

    ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ, ಪಿಎಚ್.ಡಿ ಸೇರಿದಂತೆ ಒಟ್ಟು 876 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
    ಚಿನ್ನದ ಪದಕ ಪಡೆದ ವಿಭಾಗಗಳ ವಿವರ:
    ಇಂಜಿನಿಯರಿಂಗ್– 6
    ವೈದ್ಯಕೀಯ–1
    ದಂತ ವೈದ್ಯಕೀಯ–2
    ಎಂಸಿಎ– 1

    ಒಟ್ಟು ಪದವಿಗಳು:

    ಡಾಕ್ಟರೇಟ್ ಪದವಿ–24,
    ಇಂಜಿನಿಯರಿಂಗ್–601
    ವೈದ್ಯಕೀಯ–147,
    ದಂತ ವೈದ್ಯಕೀಯ–49 ಸೇರಿದಂತೆ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ವಿತರಿಸಲಾಯಿತು
    ಅತ್ಯುತ್ತಮ ಶ್ರೇಣಿಯ ವಿದ್ಯಾರ್ಥಿಗಳು.
    ಇಂಜಿನಿಯರಿಂಗ್–1
    ವೈದ್ಯಕೀಯ–1,
    ದಂತ ವೈದ್ಯಕೀಯ–1


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.