ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ ನಡೆಯಲಿರುವ ಕೃಷಿ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಮೈಸೂರು ಕೇಂದ್ರ ಸಂವಹನ ಇಲಾಖೆ ವತಿಯಿಂದ ಆಯೋಜಿಸಿರುವ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ವಿಕಸಿತ ಬಜೆಟ್ @2047 ಛಾಯಾಚಿತ್ರ ಪ್ರದರ್ಶನವು ಜನರಿಗೆ ಬಹಳ ಉಪಯುಕ್ತ ಮಾಹಿತಿ ನೀಡುತ್ತಿದೆ ಎಂದು ನಗರ ಕ್ಷೇತ್ರದ ಶಾಸಕ ಜ್ಯೋತಿ ಗಣೇಶ್ ತಿಳಿಸಿದರು.
ಸೋಮವಾರ ಸಂಜೆ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಸಿದ್ಧಪಡಿಸಿರುವ 2025ರ ನೂತನ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು.
ಪ್ರದರ್ಶನದಲ್ಲಿ ವಿಕಸಿತ ಭಾರತ ಬಜೆಟ್ 2025–26, ಪಿಎಂ ಇಂಟರ್ನ್ಶಿಪ್ ಯೋಜನೆ, ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ, ಪ್ರಧಾನ ಮಂತ್ರಿ ಮುದ್ರಾ ಯೋಜನೆ, ಪಿಎಂ ಸೂರ್ಯ ಘರ್, ವಿಕಸಿತ ಭಾರತಕ್ಕೆ ಪ್ರಧಾನ ಮಂತ್ರಿಯವರ ದೂರದೃಷ್ಠಿ 2047 ಹಾಗೂ ಇತರೆ ಯೋಜನೆಗಳ ಛಾಯಾಚಿತ್ರ ಪ್ರದರ್ಶನದ ಜೊತೆಗೆ ಯೋಜನೆಗಳ ಫಲಾನುಭವಿಗಳು ಹಂಚಿಕೊAಡಿರುವ ಅನಿಸಿಕೆ ಮತ್ತು ಇತರೆ ಮಾಹಿತಿಯನ್ನು ವಿಡಿಯೋ ಮೂಲಕ ಬಿತ್ತರಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಂವಹನ ಇಲಾಖೆ ಕ್ಷೇತ್ರ ಪ್ರಚಾರ ಅಧಿಕಾರಿ ಶೃತಿ ಎಸ್.ಟಿ., ಕ್ಷೇತ್ರ ಪ್ರಚಾರ ಸಹಾಯಕ ಸಿ.ಕೆ. ಸುರೇಶ್, ಸಿದ್ದಗಂಗಾ ಮಠದ ಕಾರ್ಯದರ್ಶಿ ಬಿ. ಗಂಗಾಧರಯ್ಯ, ಜಂಟಿ ಕಾರ್ಯದರ್ಶಿ ಎಸ್. ಶಿವಕುಮಾರ್, ಕೆ.ಬಿ. ರೇಣುಕಪ್ಪ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4