ತಿಪಟೂರು: ದಕ್ಷತೆ, ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆಗೆ ಹೆಸರಾಗಿ ತಿಪಟೂರು ನಗರಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಸ್ಮಾನ್ ಸಾಬ್ ಗೆ ರಾಷ್ಟ್ರಪತಿ ಸೇವಾ ಪ್ರಶಸ್ತಿ ದೊರೆತಿರುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿ ಎಂದು ಬಿ.ಜೆ.ಪಿ. ಮುಖಂಡ ಕೆ.ಎಸ್. ಸದಾಶಿವಯ್ಯ ತಿಳಿಸಿದರು.
ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಅದರಲ್ಲೂ ಗಾಂಧಿನಗರ ಪೊಲೀಸ್ ಚೌಕಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉಸ್ಮಾನ್ ಸಾಬ್ ಅಪರಾಧ ದಳದ ಸದಸ್ಯರಾಗಿದ್ದು, ತಮ್ಮ ಕೆಲಸದ ಜವಾಬ್ದಾರಿಗಳನ್ನು ನಿಷ್ಠೆ, ಪ್ರಾಮಾಣಿಕ ಮತ್ತು ಸಮರ್ಪಣಾ ಭಾವದಿಂದ ನಿರ್ವಹಿಸುತ್ತಿದ್ದಾರೆ. ತಿಪಟೂರು ತಾಲ್ಲೂಕಿನ ಇಂತಹ ಸಾಧಕರಿಗೆ ರಾಷ್ಟ್ರಪತಿ ಸೇವಾ ಪ್ರಶಸ್ತಿ ದೊರೆತಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ತಿಪಟೂರು ತಾಲ್ಲೂಕಿನ ಹಾಗೂ ನಗರದ ಜನತೆಯ ಪರವಾಗಿ ಬಿ.ಜೆ.ಪಿ ಸ್ಥಾಪಕ ಕೆ.ಎಸ್ ಸದಾಶಿವಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ಆನಂದ್, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz