ತಿಪಟೂರು: ಉತ್ತಮ ಆಹಾರ ಪದ್ಧತಿಯಿಂದ ರೋಗಗಳಿಂದ ದೂರವಿರಬಹುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 25 ಲಕ್ಷ ವೆಚ್ಚದ 5 ಬೆಡ್ ಗಳ ಮರು ಆಧುನಿಕರಣ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ತಿಪಟೂರು ಸಾರ್ವಜನಿಕ ಆಸ್ಪತ್ರೆ ಜಿಲ್ಲೆಯಲ್ಲಿ ಅತ್ಯಾಧುನಿಕರಣ ಸೌಕರ್ಯ ಹೊಂದಿರುವ ಆಸ್ಪತ್ರೆಯಾಗಿದೆ ಎಂದಿಗೂ ಸಹಕಾರದಿಂದ ಆಧುನಿಕ ಯಂತ್ರಗಳ ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದರು.
ತಿಪಟೂರು ತಾಲೂಕಿನಲ್ಲಿ ಡಯಾಲಿಸಿಸ್ ರೋಗಿಗಳು ಜಾಸ್ತಿ ಇದ್ದು, ಆಹಾರ ಪದ್ಧತಿಯಿಂದ ಜನರು ರೋಗವನ್ನು ದೂರವಿಡುವ ಪ್ರಯತ್ನ ಮಾಡಬೇಕು ಎಂದು ಇದೇ ವೇಳೆ ಸಲಹೆ ನೀಡಿದರು.
ಮುಖ್ಯ ವೈದ್ಯಾಧಿಕಾರಿ ಡಾ. ಶಿವಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ರೈತರು ನಿಯಮತವಾಗಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ತಾವೇ ಬೆಳೆದ ಆಹಾರ ಉಪಯೋಗಿಸಬೇಕು. ನಗುವ ವ್ಯಾಯಾಮ ಮಾಡಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚಂದ್ರಶೇಖರ್ ವೈದ್ಯರಾದ ರಕ್ಷಿತ ಗೌಡ ನೇತ್ರ ತಜ್ಞ ಡಾಕ್ಟರ್ ಸುರೇಶ್ ಬಿಸಲೇಹಳ್ಳಿ ಜಗದೀಶ್ ಮುಂತಾದವರು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy