ಆದಾಯ ತೆರಿಗೆ ಇಲಾಖೆಯು ತೆರಿಗೆಗಳ್ಳತನದ ತನಿಖೆಯ ಭಾಗವಾಗಿ ಉತ್ತರ ಪ್ರದೇಶದ ಸುಗಂಧ ವ್ಯಾಪಾರಿಗಳು ಮತ್ತು ಇತರ ಕೆಲವರ ವಹಿವಾಟಿನ ಆವರಣಗಳ ಮೇಲೆ ಇಂದು ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಾನ್ಪುರ, ಕನೌಜ್, ರಾಷ್ಟ್ರ ರಾಜಧಾನಿ ಪ್ರದೇಶ ಮತ್ತು ಇತರ ಕೆಲವು ಪ್ರದೇಶಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
ಕನೌಜ್ ನಲ್ಲಿ ತನ್ನ ಪಕ್ಷದ ಎಂಎಲ್ ಸಿ ಪುಷ್ಪರಾಜ್ ಅಲಿಯಾಸ್ ಸಂಪಿ ಜೈನ್ ಅವರಿಗೆ ಸೇರಿದ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷವು ತನ್ನ ಅಕೃತ ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದೆ. ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪತ್ರಿಕಾಗೋಷ್ಠಿ ಕರೆದ ಬೆನ್ನಲ್ಲೇ ಬಿಜೆಪಿ ಸರ್ಕಾರ ಈ ದಾಳಿಗಳನ್ನು ನಡೆಸುತ್ತಿದೆ ಎಂದು ಎಸ್ ಪಿ ಆರೋಪಿಸಿದೆ.
ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳ ಮುನ್ನ ಯಾದವ ಅವರು ಸಮಾಜವಾದಿ ಇತ್ರ ಎಂಬ ಹೆಸರಿನ ಸುಗಂಧ ದ್ರವ್ಯವನ್ನು ಇತ್ತೀಚೆಗೆ ಬಿಡುಗಡೆ ಮಾಡಿದ್ದರು. ಇದನ್ನು ಜೈನ್ ಅವರು ತಯಾರಿಸಿದ್ದರು
ಜಿಎಸ್ ಟಿ ಗುಪ್ತಚರ ಮಹಾನಿರ್ದೇಶನಾಲಯ (ಡಿಜಿಜಿಐ)ವು ಕೇಂದ್ರೀಯ ನೇರ ತೆರಿಗೆಗಳ ಮತ್ತು ಸೀಮಾಸುಂಕ ಮಂಡಳಿ (ಸಿಬಿಐಸಿ)ಯ ಅಧೀನದ ತನಿಖಾ ಸಂಸ್ಥೆಯಾಗಿದ್ದು, ಇತ್ತೀಚೆಗೆ ಕಾನ್ಪುರ ಮತ್ತು ಕನೌಜ್ ನಲ್ಲಿ ವ್ಯಾಪಕ ದಾಳಿಗಳನ್ನು ನಡೆಸಿ ಸುಗಂಧ ದ್ರವ್ಯ ವ್ಯಾಪಾರಿ ಪೀಯುಷ್ ಜೈನ್ರನ್ನು ಬಂಧಿಸಿತ್ತು ಮತ್ತು 197 ಕೋಟಿ ರೂ.ಗೂ ಅಕ ನಗದು, 26 ಕೆ.ಜಿ. ಚಿನ್ನ ಮತ್ತು ಭಾರೀ ಪ್ರಮಾಣದ ಶ್ರೀಗಂಧದ ಎಣ್ಣೆಯನ್ನು ವಶಪಡಿಸಿಕೊಂಡಿತ್ತು. ಆದಾಯ ತೆರಿಗೆ (ಐಟಿ) ಇಲಾಖೆಯು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ)ಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy