ಭಾರೀ ಮಳೆಯ ಕಾರಣ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಭಾರೀ ಪ್ರಮಾಣದ ಗುಡ್ಡ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ.
ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ 7 ಮಂದಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಟ್ಯಾಂಕರ್ ಚಾಲಕ, ಕ್ಲೀನರ್ ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಎನ್ ಡಿಆರ್ ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಸಂಸದರು ತಿಳಿಸಿದರು.
ಗುಡ್ಡ ಕುಸಿತವಾದ ಜಾಗದಲ್ಲಿ ಒಂದು ಚಹಾ ಅಂಗಡಿ ಇತ್ತು. ಇಲ್ಲಿ ಕೆಲವರು ಚಹಾ ಸೇವಿಸುತ್ತಿದ್ದರು. ಹೀಗಾಗಿ ಎಷ್ಟು ಮಂದಿ ಅಲ್ಲಿದ್ದರು ಎನ್ನುವ ಬಗ್ಗೆ ಖಚಿತವಾದ ಮಾಹಿತಿ ಸಿಕ್ಕಿಲ್ಲ. ಟ್ಯಾಂಕರ್ ಚಾಲಕ ಮತ್ತು ಕ್ಲೀನರ್ ಟ್ಯಾಂಕರ್ ನಿಲ್ಲಿಸಿ ಚಹಾ ಸೇವಿಸುತ್ತಿದ್ದಾಗ ದುರಂತ ಸಂಭವಿಸಿದೆ. ಕುಸಿತದ ರಭಸಕ್ಕೆ ಪಕ್ಕದ ನದಿಯ ಬದಿಗೆ ಟ್ಯಾಂಕರ್ ಎಸೆಯಲ್ಪಟ್ಟಿದೆ ಎಂದು ವರದಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


