ಗೆಳತಿ ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೊಬ್ಬ ಫೇಸ್ ಬುಕ್ ಲೈವ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾರೀ ದುರಂತಕ್ಕೆ ಕಾರಣವಾಗಿದೆ.
ಅಸ್ಸಾಂನ ಕಲಾಯಿನ್ನ ಜಯದೀಪ್, ವೈದ್ಯಕೀಯ ಮಾರಾಟ ವೃತ್ತಿಪರರಾಗಿ ಕೆಲಸ ಮಾಡುತ್ತಿದ್ದರು ಮತ್ತು ಸಿಲ್ಸಾರ್ನಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದರು. ಅದೇ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಫೇಸ್ ಬುಕ್ ಲೈವ್ ನಲ್ಲಿ ಹೇಳಿದ್ದು, ‘ಅವಳನ್ನು ತುಂಬಾ ಪ್ರೀತಿಸಿದ್ದೆ, ಪ್ರೀತಿ ವ್ಯಕ್ತಪಡಿಸಿದ್ದೆ, ಎಲ್ಲರ ಮುಂದೆ ನಿರಾಕರಿಸಿದ್ದಾಳೆ, ಆಗ ಆಕೆಯ ಚಿಕ್ಕಪ್ಪ ಬಂದು ಸಂಬಂಧ ಮುಂದುವರಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ನನ್ನಿಂದಾಗಿ ಅವಳಿಗೆ ನೋವಾಗಬಾರದು. ಅದಕ್ಕಾಗಿಯೇ ನಾನು ಸಾಯುತ್ತಿದ್ದೇನೆ. ಅಮ್ಮಾ, ನನ್ನನ್ನು ಕ್ಷಮಿಸು. ನನ್ನ ಗೆಳತಿ ಇಲ್ಲದೆ ನಾನು ಬದುಕಲು ಸಾಧ್ಯವಿಲ್ಲ. ಅದಕ್ಕೇ ಇಹಲೋಕ ತ್ಯಜಿಸುತ್ತಿದ್ದೇನೆ’ ಎಂದು ಸಂಕಟ ತೋಡಿಕೊಂಡು ಪ್ರಾಣ ಕಳೆದುಕೊಂಡಿದ್ದಾನೆ.ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


