ರಾಜ್ಯದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಬಳಿಕ ಬಿಜೆಪಿ ಸಂಘಟನೆ ಹಾಗೂ ಆಡಳಿತಾತ್ಮಕವಾಗಿ ಸಾಕಷ್ಟು ಬದಲಾವಣೆಗಳನ್ನು ತೆರೆಮರೆಯಲ್ಲಿ ಮಾಡಿಕೊಳ್ಳುತ್ತಿದ್ದು, ಇದರ ಮುಂದುವರೆದ ಭಾಗವಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ. ಸೋಮಣ್ಣರಿಗೆ ಮಣೆ ಹಾಕುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಈಗಾಗಲೇ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಎರಡೆರಡು ಕ್ಷೇತ್ರಗಳಿಂದ ಕಣಕ್ಕಿಳಿದು ಹಿನ್ನಡೆ ಅನುಭವಿಸಿರುವ, ಪ್ರಬಲ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ ಮಾಜಿ ಸಚಿವ ವಿ. ಸೋಮಣ್ಣರಿಗೆ ಖುದ್ದು ಅಮಿತ್ ಶಾ ಅವರೇ ಕರೆ ಮಾಡಿದ್ದು, ರಾಜ್ಯಾಧ್ಯಕ್ಷರಾಗುವಂತೆ, ತಿಳಿಸಿದ್ದಾರೆ ಎನ್ನಲಾಗಿದೆ.
ಕಳೆದೆರಡು ದಿನಗಳ ಹಿಂದೆ ಅಮಿತ್ ಶಾ ವಿ. ಸೋಮಣ್ಣ ರಿಗೆ ಕರೆ ಮಾಡಿದ್ದು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದು, ರಾಜ್ಯಾಧ್ಯಕ್ಷರಾಗಿ ಎಂದಿದ್ದಾರೆ ಎಂಬುದು ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ವಿ. ಸೋಮಣ್ಣ ಒಪ್ಪುತ್ತಾರಾ? ಕಾದು ನೋಡಬೇಕು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


