ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಸಂಪಿಗೆ ರೋಡ್ ರೈಲ್ವೆ ನಿಲ್ದಾಣದಲ್ಲಿ ಇಂದು ಸಂಜೆ ಪರಿವೀಕ್ಷಣೆ ಹಾಗೂ ಯಶವಂತಪುರ–ಚಿಕ್ಕಮಗಳೂರು ಎಕ್ಸ್ ಪ್ರೆಸ್ ಗೆ ಹೆಚ್ಚುವರಿ ರೈಲು ನಿಲುಗಡೆಗೆ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಮಸಾಲ ಜಯರಾಮ, ಬೆಂಗಳೂರು ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಯೋಗೇಶ್ ಮೋಹನ್, ನೈರುತ್ಯ ರೈಲ್ವೆ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಡಾ.ಅನೂಪ್ ದಯಾನಂದ ಸಾಧು, ಕಾರ್ಯಕ್ರಮದ ವ್ಯವಸ್ಥಾಪಕ ಶ್ರೀನಿವಾಸ್ ಸೇರಿದಂತೆ ರೈಲ್ವೇ ಇಲಾಖೆಯ ಅಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q