ಸರಗೂರು : ಸಚಿವ ವಿ.ಸೋಮಣ್ಣ ಮಹಿಳೆಯ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ರಾಜ್ಯ ಸಂಶೋಧಕರ ಸಂಘದ ಅಧ್ಯಕ್ಷರಾದ ಮರಿದೇವಯ್ಯ ಎಸ್. ನೇತೃತ್ವದಲ್ಲಿ ಹೆಗ್ಗಡದೇವನ ಕೋಟೆ ತಾಲೂಕಿನ ಹ್ಯಾಂಡ್ ಪೋಸ್ಟ್ ವೃತ್ತದಲ್ಲಿ ಪಂಜಿನ ಮೆರವಣಿಗೆ ನಡೆಸಿದರು
ಸಂಶೋಧನ ಸಂಘದ ರಾಜ್ಯ ಅಧ್ಯಕ್ಷರಾದ ಮರಿದೇವಯ್ಯ ಮಾತನಾಡಿ, ಶನಿವಾರ ಚಾಮರಾಜನಗರ ಗುಂಡ್ಲುಪೇಟೆಯ ಅಂಗಾರ ಗ್ರಾಮದಲ್ಲಿ ಸಹಾಯ ಕೇಳಲು ಬಂದ ಅಸಹಾಯಕ ದಲಿತ ಮಹಿಳೆಯ ಮೇಲೆ ಹಲ್ಲೆ ಮಾಡಿ ಅವಮಾನ ಮಾಡಿರುವ ಸಚಿವ ಸೋಮಣ್ಣ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದೆ ಮುಖ್ಯಮಂತ್ರಿಗಳು ಸೋಮಣ್ಣನನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಕೂಡಲೇ ಪೊಲೀಸ್ ಇಲಾಖೆಯು ಸ್ವಯಂ ಪ್ರೇರಿತವಾಗಿ ಸುಮೊಟೊ ಕೇಸ್ ದಾಖಲಿಸಬೇಕು ಹಾಗೂ ನ್ಯಾಯಾಂಗ ತನಿಖೆ ಮಾಡಬೇಕೆಂದು ಒತ್ತಾಯಿಸುತ್ತೇವೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಪುರಸಭೆಯ ಸದಸ್ಯರಾದ ಪ್ರೇಮ್ ಸಾಗರ್, ಜೀವಿಕ ರಾಜ್ಯ ಸಂಚಾಲಕರಾದ ಡಾ.ಉಮೇಶ, ಸ್ಟುಡಿಯೋ ಮಧುಸೂದನ್, ಮಹಾನಾಯಕ ರಕ್ಷಣಾ ವೇದಿಕೆಯ ಅಧ್ಯಕ್ಷ ಮಾನವೀಯಾಕರ್, ಯುವ ಮುಖಂಡ ಅವಿನಾಶ್, ಕೊಹಳ ಬಸವರಾಜು, ಶಿವರಾಜು, ಪ್ರಸಾದ್, ಜೊಂಪನಹಳ್ಳಿ ಕಿರಣ್ ಕುಮಾರ್, ವೆಂಕಟೇಶ್ ಇದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


