ವಡೋದರ: ಗುಜರಾತ್ ನ ವಡೋದರದ ಕಾರ್ಖಾನೆಯೊಂದರ ಬಾಯ್ಲರ್ ನಲ್ಲಿ ಪ್ರಬಲ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ರಾಸಾಯನಿಕ ಕಾರ್ಖಾನೆಯಲ್ಲಿ ಬೆಳಿಗ್ಗೆ 9.30ಕ್ಕೆ ಈ ಘಟನೆ ನಡೆದಿದ್ದು, ರಾಸಾಯನಿಕ ಕಾರ್ಖಾನೆಯ ಬಾಯ್ಲರ್ ಭಾರೀ ಶಬ್ಧದೊಂದಿಗೆ ಸ್ಫೋಟಗೊಂಡಿದ್ದು, ಪರಿಣಾಮವಾಗಿ ನಾಲ್ವರು ಮೃತಪಟ್ಟು, ಸುಮಾರು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ ಒಟ್ಟು 15 ಮಂದಿ ಗಾಯಗೊಂಡಿದ್ದರು. ಈ ಪೈಕಿ ನಾಲ್ವರು ಆಸ್ಪತ್ರೆಗೆ ಕರೆತರುವ ವೇಳೆ ಮೃತಪಟ್ಟರು. ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸ್ಥಳಕ್ಕೆ ಧಾವಿಸಿದ್ದು ಸ್ಫೋಟಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy