ಬೆಂಗಳೂರು : ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಈ ಆದೇಶ ಇಂದಿನಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ವಾಹನ ಚಾಲಾಯಿಸುವ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಸೀಟ್ ಬೆಲ್ಟ್ ಅನ್ನು ಧರಿಸದೇ ವಾಹನವನ್ನು ಚಲಾಯಿಸಿದ್ರೇ ಅಂತವರಿಗೆ 1 ಸಾವಿರ ದಂಡ ವಿಧಿಸಲಾಗುತ್ತದೆ ಎಂದಿದ್ದಾರೆ.
ವಾಹನ ಚಲಾಯಿಸುವ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸದೇ ಇದ್ದರೇ ಅಪಘಾತವಾದಂತ ಸಂದರ್ಭದಲ್ಲಿ ಏರ್ ಬ್ಯಾಗ್ ಓಪನ್ ಆಗುವುದಿಲ್ಲ. ಹೀಗೆ ಏರ್ ಬ್ಯಾಗ್ ಓಪನ್ ಆಗದೇ ಇದ್ದಾಗ ಅಪಘಾತದ ವೇಳೆಯಲ್ಲಿ ಸಾವು ನೋವು ಸಂಭವಿಸಿವೆ.
ಈ ಹಿನ್ನಲೆಯಲ್ಲಿಯೇ ಕೇಂದ್ರ ಸರ್ಕಾರ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸೋ ಕರಡನ್ನು ಪ್ರಕಟಿಸಿತ್ತು. ಈ ಆದೇಶದಂತೆ ರಾಜ್ಯದಲ್ಲಿಯೂ ಸೀಟ್ ಬೆಲ್ಟ್ ಕಡ್ಡಾಯ ಗೊಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


