ಚಿತ್ರದುರ್ಗ: ವಾಹನ ನಿಲುಗಡೆಗೆ ಸರಿಯಾದ ವ್ಯವಸ್ಥೆ ಕಲ್ಪಿಸುವಂತೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೀವ ರಕ್ಷಕ ಟ್ರಸ್ಟ್ ವತಿಯಿಂದ ಹಿರಿಯೂರು ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬೆಂಗಳೂರು ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ದಿನನಿತ್ಯ ಸಾವಿರಕ್ಕೂ ಹೆಚ್ಚು ವಾಹನಗಳು ಹಿರಿಯೂರು ನಗರದ ಪ್ರವೇಶ ಮಾಡುತ್ತಿದ್ದು, ರಸ್ತೆಯಲ್ಲಿ ಅತಿಯಾದ ಲಾರಿ ನಿಲುಗಡೆ , ದೊಡ್ಡ ವಾಹನಗಳ ನಿಲುಗಡೆಯಿಂದ ಹಿರಿಯೂರು ನಗರದ ಒಳಬರುವ ವಾಹನಗಳಿಗೆ ಹಾಗೂ ಆ ಭಾಗದಲ್ಲಿ ಸಂಚರಿಸುವ ಹಿರಿಯೂರಿನ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ತಕ್ಷಣವೇ ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಜೀವಿನಿ ಜೀವರಕ್ಷಕ ಟ್ರಸ್ಟ್ ನ ರಾಜ್ಯ ಸಂಚಾಲಕರಾದ ಮಹಾಂತೇಶ್ ಆರ್, ತಾಲ್ಲೂಕು ಸಂಚಾಲಕರಾದ ಚೇತನ್ ಆಲೂರು, ತಾಲ್ಲೂಕು ಅಧ್ಯಕ್ಷರಾದ ಧನುಷ್, ತಾಲೂಕು ಉಪಾಧ್ಯಕ್ಷರಾದ ಗಿರೀಶ್,ಕಾರ್ಯದರ್ಶಿ ರಾಘವೇಂದ್ರ, ಸಂತೋಷ್, ಪ್ರಸನ್ನ , ನಾಗರ್ಜುನ್, ಹರೀಶ್, ಅವಿನಾಶ್, ದರ್ಶನ್, ಇನ್ನಿತರ ಸದಸ್ಯರ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ಒಳಬರುವ ವಾಹನಗಳಿಗೆ ಸರಿಯಾದ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಲಾಗಿತ್ತು .
ವರದಿ: ಮುರುಳಿಧರನ್ ಆರ್ ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy