ಕೊರಟಗೆರೆ: ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲಪನಹಳ್ಳಿ ಗ್ರಾಮದಲ್ಲಿ ಜಯಮಂಗಲಿ ನದಿಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ವಿ ಹೋಗಿದ್ದ ಟಾಟಾ ಏಸ್ ವಾಹನ ಸಮೇತ ನದಿಯಲ್ಲಿ ಕೊಚ್ಚಿ ಹೋಗಿದ್ದ ಚಾಲಕನ ಮೃತದೇಹ ಬುಧವಾರ ಪತ್ತೆಯಾಗಿದೆ.
ಘಟನೆ ಬಳಿಕ ಸತತ 24 ಗಂಟೆಯಿಂದ ಸ್ಥಳದಲ್ಲೇ ಬೀಡುಬಿಟ್ಟಿದ್ದ ಅಗ್ನಿಶಾಮಕ ಸಿಬ್ಬಂದಿ ಚಾಲಕ ಮತ್ತು ವಾಹನ ಹುಡುಕಾಟದಲ್ಲಿ ತೊಡಗಿದ್ದರು. ಕೊನೆಗೂ ಟಾಟಾ ಎಸ್ ವಾಹನ ಮತ್ತು ಮೃತ ಚಾಲಕನ ಶವ ಪತ್ತೆಯಾಗಿದೆ.
ಕೊರಟಗೆರೆ ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಪ್ಪನಹಳ್ಳಿ ಗ್ರಾಮದ ಜಯಮಂಗಲಿ ನದಿಯಲ್ಲಿ ಟಾಟಾ ಏಸ್ ವಾಹನ ಚಲಾಯಿಸಿಕೊಂಡು ಹೋಗಿದ್ದ ಚಾಲಕ ನೀರಿನಲ್ಲಿ ಕೊಚ್ಚಿ ಹೋಗಿದ್ದ. ಕಾರ್ಯಾಚರಣೆಗೆ ಅಗ್ನಿಶಾಮಕ ಸಿಬ್ಬಂದಿಗೆ ಕೊರಟಗೆರೆ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ಸಾಥ್ ನೀಡಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz