ಬೆಂಗಳೂರು : ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಬೆಂಗಳೂರು ವಕೀಲರ ಸಂಘ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಭರವಸೆ ನೀಡಿದರು.
ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ವಕೀಲ ಸಮೂಹ ಈ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು. ಈ ಪ್ರತಿಭಟನೆಗೆ ನಾನೂ ಬೆಂಬಲ ಸೂಚಿಸಿ ವಿಧಾನಸಭೆಯಲ್ಲಿ ವಕೀಲ ಸಮೂಹದ ಪರವಾಗಿ ಧ್ವನಿ ಎತ್ತಿದ್ದೆ. ಈಗ ನಾವೇ ಅಧಿಕಾರಕ್ಕೆ ಬಂದಿದ್ದೇವೆ. ಈಗ ಈ ಕಾಯ್ದೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಬದ್ದವಾಗಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ವಕೀಲರ ಸಂಘ “ವಕೀಲರ ವಿಮೆ ಯೋಜನೆಯನ್ನೂ ಜಾರಿಗೆ ತರುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆಯೂ ಸಮಗ್ರವಾಗಿ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


