nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025
    Facebook Twitter Instagram
    ಟ್ರೆಂಡಿಂಗ್
    • ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!
    • ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ
    • ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ
    • ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ
    • ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ
    • ಬಮೂಲ್​​ ರೈತರ ಸಂಸ್ಥೆ ಇದನ್ನು ಬೆಳೆಸುವುದು ನಮ್ಮ ಕರ್ತವ್ಯ: ಡಿ.ಕೆ. ಸುರೇಶ್​
    • ಸರೋಜಾದೇವಿ ಎಂದ ತಕ್ಷಣ ಚೆನ್ನಮ್ಮ, ಬಬ್ರುವಾಹನ ನೆನಪಾಗುತ್ತದೆ: ಸಿಎಂ ಸಂತಾಪ
    • ಅಭಿನಯ ಸರಸ್ವತಿ ಬಿ.ಸರೋಜಾದೇವಿ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಲ್ಮೀಕಿ ನಿಗಮ : ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    Uncategorized October 23, 2024

    ವಾಲ್ಮೀಕಿ ನಿಗಮ : ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    By adminOctober 23, 2024No Comments2 Mins Read
    valmiki

    ತುಮಕೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

    ಉದ್ಯಮಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕ್ ಸಹಯೋಗದೊಂದಿಗೆ)ಯಡಿ ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ. 70ರಷ್ಟು ಸಹಾಯಧನ ಅಥವಾ ಗರಿಷ್ಟ 2 ಲಕ್ಷ ರೂ.ಗಳ ಸಾಲ ನೀಡಲಾಗುವುದು. ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ ಘಟಕ ವೆಚ್ಚದ ಶೇ. 75ರಷ್ಟು ಸಹಾಯಧನ ಅಥವಾ ಗರಿಷ್ಟ 4 ಲಕ್ಷ ರೂ.ಗಳ ಸಾಲ ಸೌಲಭ್ಯವನ್ನು ಒದಗಿಸಲಾಗುವುದು.


    Provided by
    Provided by

    ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕ ವೆಚ್ಚ 1 ಲಕ್ಷ ರೂ.ಗಳಿಗೆ 50,000 ರೂ.ಗಳ ಸಹಾಯಧನ ಹಾಗೂ ಶೇ. 4ರಷ್ಟು ಬಡ್ಡಿದರದಲ್ಲಿ 50,000 ರೂ.ಗಳ ಸಾಲ ಮಂಜೂರು ಮಾಡಲಾಗುವುದು.
    ಪ್ರೇರಣಾ(ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆಯಡಿ ನೋಂದಾಯಿತ ಸ್ವ–ಸಹಾಯ ಮಹಿಳಾ ಸಂಘದ 10 ಸದಸ್ಯರು ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕ ವೆಚ್ಚ 2.50 ಲಕ್ಷ ರೂ.ಗಳಿಗೆ 1.50 ಲಕ್ಷ ರೂ.ಗಳ ಸಹಾಯಧನ ಹಾಗೂ 1 ಲಕ್ಷ ರೂ.ಗಳನ್ನು ಸಾಲದ ರೂಪದಲ್ಲಿ ನೀಡಲಾಗುವುದು.

    ಸಮಗ್ರ ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ನೀರಾವರಿ ಕೊಳವೆಬಾವಿ, 1.20 ರಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್‌ಸೆಟ್ ಅಳವಡಿಸಿ ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿ ಕೊಡಲಾಗುವುದು.

    ಅರ್ಜಿದಾರರು ಕನಿಷ್ಟ ಕಳೆದ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರು ವ್ಯವಸಾಯ ಉದ್ದೇಶಕ್ಕೆ ಸಂಬಂಧಪಟ್ಟಂತೆ 18 ರಿಂದ 60 ವರ್ಷ; ವಾಹನ, ಸ್ವಯಂ ಉದ್ಯೋಗ ಉದ್ದೇಶಗಳಿಗೆ ಸಂಬಂಧಪಟ್ಟಂತೆ 18 ರಿಂದ 50 ವರ್ಷದೊಳಗಿನ ವಯೋಮಾನದವರಾಗಿರಬೇಕು. ಕೊಳವೆಬಾವಿ ಸೌಲಭ್ಯಕ್ಕೆ ಯಾವುದೇ ವಯೋಮಿತಿ ಇರುವುದಿಲ್ಲ.

    ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ 1,50,000 ರೂ. ಹಾಗೂ ನಗರ ಪ್ರದೇಶದವರಿಗೆ 2,00,000 ರೂ.ಗಳ ಮಿತಿಯೊಳಗಿರಬೇಕು. ಅರ್ಜಿದಾರರ ಕುಟಂಬದ ಯಾವುದೇ ಸದಸ್ಯರು ಸರ್ಕಾರಿ / ಅರೆ ಸರ್ಕಾರಿ ಸಂಸ್ಧೆಯಲ್ಲಿ ನೌಕರಿಯಲ್ಲಿರಬಾರದು. ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ವಾಹನಗಳಿಗೆ ಆರ್ಥಿಕ ನೆರವು ಬಯಸುವ ಫಲಾಪೇಕ್ಷಿಯು ಚಾಲನಾ ಪರವಾನಗಿಯೊಂದಿಗೆ ಬ್ಯಾಡ್ಜ್ ಹೊಂದಿರಬೇಕು.
    ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವವರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಭೂ ಒಡೆತನ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾಪೇಕ್ಷಿಯು ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾ ಕೃಷಿ ಕೂಲಿ ಕಾರ್ಮಿಕರಾಗಿರಬೇಕು.

    ಆಸಕ್ತರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/ ಮೂಲಕ ನವೆಂಬರ್ 23ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿಯ ದೂ.ಸಂ. 0816–2280165 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿಯಾದ ಶಾಸಕ ಅನಿಲ್

    July 13, 2025

    ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

    July 4, 2025

    ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ: ತುಮಕೂರಿನಲ್ಲಿದೆ ಉದ್ಯೋಗಾವಕಾಶ

    June 14, 2025
    Our Picks

    ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ

    July 14, 2025

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ರಾಯಚೂರು: ಕಸ ವಿಲೇವಾರಿ ವಾಹನಗಳನ್ನು ಕದ್ದಿರುವ ಘಟನೆ ಕವಿತಾಳ ಪಟ್ಟಣ ಪಂಚಾಯತಿ ಕಚೇರಿ ಆವರಣದಲ್ಲಿ ನಡೆದಿದೆ. ಪಟ್ಟಣ ಪಂಚಾಯತಿ ಕಚೇರಿ…

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025

    ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ

    July 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.