nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    • ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಲ್ಮೀಕಿ ನಿಗಮದ ಪ್ರಕರಣ: CID ಮತ್ತು FSL ವರದಿ ಆಧಾರದ ಮೇಲೆ ಕ್ರಮ: ಸಚಿವ ಬಿ.ನಾಗೇಂದ್ರ
    ರಾಜ್ಯ ಸುದ್ದಿ May 29, 2024

    ವಾಲ್ಮೀಕಿ ನಿಗಮದ ಪ್ರಕರಣ: CID ಮತ್ತು FSL ವರದಿ ಆಧಾರದ ಮೇಲೆ ಕ್ರಮ: ಸಚಿವ ಬಿ.ನಾಗೇಂದ್ರ

    By adminMay 29, 2024No Comments2 Mins Read
    nagendra

    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ನಿಗಮದ ಕೇಂದ್ರ ಕಛೇರಿಯ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ನನಗೆ ಅತೀವ ನೋವು ತಂದಿದೆ. ಈ ಹಣ ದುರುಪಯೋಗ ಪ್ರಕರಣದಲ್ಲಿ ನಮ್ಮ ಇಲಾಖೆ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ಯಾರೇ ಇರಲಿ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ತಿಳಿಸಿದರು.

    ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹೇಳಿದಿಷ್ಟು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮುಖ್ಯ ಖಾತೆಯಲ್ಲಿ ಹಿಂದಿನ ಸಾಲಿನ ಹಾಗೂ 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಮೊತ್ತದಲ್ಲಿ 88 ಕೋಟಿ ಹಣವನ್ನು ನನಗೆ ಹಾಗೂ ನಿಗಮದ ಅಧ್ಯಕ್ಷರ ಗಮನಕ್ಕೂ ಬಾರದೇ   ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಆಗಿರುತ್ತದೆ. ನಿನ್ನೆ ಪ್ರಕರಣ ಬೆಳಕಿಗೆ ಬಂದ ನಂತರ ಇಲಾಖೆ ಅಧಿಕಾರಗಳು ಕೂಡ ಇದು ನಮಗೆ ಯಾವುದೇ ರೀತಿಯ ಮಾಹಿತಿ ಇಲ್ಲದೆ ದುರುಪಯೋಗ ಆಗಿದೆ ಎಂದು ತಿಳಿಸಿದ್ದಾರೆ.

    ಇನ್ನು ವಾಲ್ಮೀಕಿ ನಿಗಮದ ಎಂ. ಡಿ ಜೆ. ಜೆ. ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರುಶುರಾಮ್ ಹಾಗೂ ಬ್ಯಾಂಕ್ ವ್ಯವಸ್ಥಾಪಕಿ ಶುಚಿಸ್ಮಿತಾ 3 ಜನ ನನ್ನ ಸಾವಿಗೆ ನೇರ ಕಾರಣರಾದವರು ಎಂದು ಸಾವಿನ ಹೇಳಿಕೆ ಪತ್ರದಲ್ಲಿ ಇದ್ದು ಈ ಕುರಿತು ನಿನ್ನೆ ಆರ್ಥಿಕ ಇಲಾಖೆಯ ಮುಖ್ಯ ಅಧಿಕಾರಿಗಳ ತಂಡ ನಿಗಮದ ಕೇಂದ್ರ ಕಚೇರಿಗೆ ತೆರಳಿ ಎಲ್ಲಾ ಲೆಕ್ಕಪತ್ರಗಳನ್ನು ಸುದೀರ್ಘವಾಗಿ ಪರಿಶೀಲನೆ ನಡೆಸಿದ ವೇಳೆ ನಿಗಮದ ಅಧಿಕಾರಿಗಳಿಗೆ ತಿಳಿಯದೇ ನಕಲು ಸಹಿ ಬಳಸಿ ದೊಡ್ಡ ಮೊತ್ತದ ಹಣ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದೆ.

    ಈಗಾಗಲೇ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಹಾಗೂ ನಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನಿಗಮದ ಎಂ.ಡಿ. ಪದ್ಮನಾಭ ಅವರಿಂದ ನಿನ್ನೆ ಸರ್ಕಾರಕ್ಕೆ ವರದಿ ಪಡೆದಿದ್ದು, ನಿನ್ನೆ ಮುಖ್ಯಮಂತ್ರಿಗಳು ಇದರ ಬಗ್ಗೆ ವರದಿ ಪರಿಶೀಲನೆ ನಡೆಸಿದ್ದಾರೆ, ಇದರ ಬಗ್ಗೆ ಬ್ಯಾಂಕ್ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಆದರೆ ಎಫ್.ಎಸ್.ಎಲ್ ವರದಿ ಬಂದರೆ ಸಹಿ ನಕಲು ಆಗಿದೆಯಾ ಅಥವಾ ಇವರೇ ಈ ಪ್ರಕರಣದಲ್ಲಿ ಶಾಮಿಲು ಆಗಿದ್ದಲ್ಲಿ ಕೆಲಸದಿಂದ ವಜಾಗೊಳಿಸಿ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

    ಈಗಾಗಲೇ ಈ ಪ್ರಕರಣದಲ್ಲಿ ದುರುಪಯೋಗ ಆಗಿರುವ ಎಲ್ಲಾ ಹಣವನ್ನು ವಾಪಾಸ್ ನಿಗಮದ ಖಾತೆಗೆ ಪಡೆದುಕೊಳ್ಳಲು ಬ್ಯಾಂಕ್ ಗೆ ಅಂತಿಮ ಗಡುವು ನೀಡಿ ಎಂದು ನಿನ್ನೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಈಗಾಗಲೇ 88 ಕೋಟಿ ಹಣದ ಪೈಕಿ 28 ಕೋಟಿ ಹಣವು ನಮ್ಮ ನಿಗಮದ ಖಾತೆಗೆ ಮರುಪಾವತಿ ಆಗಿದೆ.  ಇನ್ನುಳಿದ ಸುಮಾರು 60ಕೋಟಿ ಹಣವನ್ನು ಅತೀ ಶೀಘ್ರದಲ್ಲಿ ವಾಪಸ್ ಪಡೆಯುತ್ತೇವೆ. ಬಡವರ ಕಲ್ಯಾಣಕ್ಕೆ ಮಿಸಲಿಟ್ಟ ಹಣವನ್ನು  ಕಾನೂನು ಬಾಹಿರವಾಗಿ ಯಾರು ಪಡೆಯದಂತೆ ಕಾಪಾಡುವುದು ನನ್ನ ಹಾಗೂ ನಿಗಮದ ಅಧ್ಯಕ್ಷರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

    ಈಗಾಗಲೇ ಸಿ.ಐ.ಡಿ. ಅಧಿಕಾರಿಗಳು ವರದಿ ಪಡೆಯಲು ತನಿಖೆ ಶುರುಮಾಡಿದ್ದು, ವರದಿ ನಮ್ಮ ಸರ್ಕಾರಕ್ಕೆ ಸಲ್ಲಿಕೆಯಾದ ತಕ್ಷಣವೇ  ಈ ಪ್ರಕರಣದಲ್ಲಿ ಯಾರು ಆರೋಪಿ ಎಂದು ಸಾಬೀತು ಅವರನ್ನು ಕೆಲಸದಿಂದ ವಜಾಗೊಳಿಸಿ ಕಾನೂನಿನ ಅಡಿಯಲ್ಲಿ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ತುಮಕೂರು: ಎಸ್‌ ಐಆರ್ ಎನ್ಯುಮರೇಷನ್ ಅರ್ಜಿ ವಿತರಣೆಯಲ್ಲಿ ಜು.23ರ ಗುರುವಾರದ ಅಂತ್ಯಕ್ಕೆ ಶೇ.100ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ…

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.