ತುಮಕೂರು: ಸುಮಾರು ಮೂರೂವರೆ ತಿಂಗಳುಗಳಿಂದ ಶ್ರೀವಾಲ್ಮೀಕಿ ಸ್ವಾಮೀಜಿಯವರು ಎಸ್ ಟಿ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದು, ಅವರ ಧರಣಿಯನ್ನು ಬೆಂಬಲಿಸಲು ಶನಿವಾರ ತುಮಕೂರಿನಿಂದ ನಾಯಕ ಸಮುದಾಯ ಮುಖಂಡರು ಬೆಂಗಳೂರಿಗೆ ತೆರಳಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಬೇಕೆಂಬ ಪ್ರತಿಭಟನೆ ನಡೆಸುತ್ತಿದ್ದಾರೆ. ಮೀಸಲಾತಿ ಸಿಗುವವರೆಗೂ ಸ್ವಾಮೀಜಿಗಳು ಹೋರಾಟ ಮುಂದುವರಿಸಲಿದ್ದಾರೆ. ಹಾಗಾಗಿ ತುಮಕೂರಿನ ನಮ್ಮ ಸಮುದಾಯದ ಎಲ್ಲ ನಾಯಕರು ಬೆಂಗಳೂರಿಗೆ ಹೋಗ್ತಾ ಇದ್ದೀವಿ, ಸ್ವಾಮೀಜಿಗಳಿಗೆ ಬೆಂಬಲ ನೀಡುತ್ತೇವೆ ಎಂದು ಮುಖಂಡರು ಇದೇ ವೇಳೆ ತಿಳಿಸಿದರು.
7.5 ಶೇ. ಮೀಸಲಾತಿ ಸಿಗುವವರೆಗೂ ಧರಣಿ ಬಿಡುವುದಿಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿಗಳು ಯಾವುದೇ ರೀತಿಯ ತೀರ್ಮಾನ ತೆಗೆದುಕೊಂಡರೂ ನಾವು ಅವರನ್ನು ಬೆಂಬಲಿಸುತ್ತೇವೆ ಎಂದು ತಿಳಿಸಿದರು.
ತುಮಕೂರು ನಗರ ವಾಲ್ಮೀಕಿ ಜನಾಂಗದ ಮುಖಂಡರುಗಳು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಾಂತಲಾ ರಾಜಣ್ಣನವರ ನೇತೃತ್ವದಲ್ಲಿ ಬೆಂಗಳೂರಿಗೆ ತೆರಳಿದರು.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5