ಗೊಂಡಾ : ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಮತ್ತು ಆತನ ಸೋದರ ಸಂಬಂಧಿ ಅತ್ಯಾಚಾರವೆಸಗಿದ್ದು ಮತ್ತು ನಂತರ ‘ತ್ರಿವಳಿ ತಲಾಖ್’ ಮೂಲಕ ವಿಚ್ಛೇದನ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ತನ್ನ ಪತಿ ಮೊಹಮ್ಮದ್ ಅದ್ನಾನ್ ವರದಕ್ಷಿಣೆಗೆ ಕಿರುಕುಳ ನೀಡುತ್ತಿದ್ದರು ಮತ್ತು ನನಗೆ ಥಳಿಸುತ್ತಿದ್ದರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.ಆರೋಪಿಯ ಹಿಂಸೆಯಿಂದ ಬೇಸತ್ತು ತವರು ಮನೆಯಲ್ಲಿ ವಾಸಿಸಲು ಪ್ರಾರಂಭಿಸಿರುವುದಾಗಿ ಪೊಲೀಸ್ ಸೂಪರಿಂಟೆಂಡೆಂಟ್ ಹೇಳಿದ್ದಾರೆ.
ಮಂಗಳವಾರ ಆರೋಪಿ ಅದ್ನಾನ್ ಮತ್ತು ಅವರ ಸೋದರಸಂಬಂಧಿ ತನ್ನ ಅತ್ತೆಯ ಮನೆಗೆ ಹೋಗಿದ್ದು, ಇಬ್ಬರೂ ಮಹಿಳೆಯನ್ನು ಒಬ್ಬಂಟಿಯಾಗಿ ಇರುವುದನ್ನು ಗಮನಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯನ್ನು ಥಳಿಸಿ, ಕಾನೂನುಬಾಹಿರವಾದ ‘ತ್ರಿವಳಿ ತಲಾಖ್’ ಮೂಲಕ ವಿಚ್ಛೇದನ ನೀಡಲಾಗಿದೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಹೇಳಿದ್ದಾರೆ.
ಲಕ್ನೋ ಮೂಲದ ಆರೋಪಿಯಾಗಿರುವ ಮಹಿಳೆಯ ಪತಿ ಮೊಹಮ್ಮದ್ ಅದ್ನಾನ್ ನನ್ನು ಗುರುವಾರ ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆತನ ಸೋದರ ಸಂಬಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಸೋದರ ಸಂಬಂಧಿಯನ್ನು ಬಂಧಿಸಲು ಪ್ರಯತ್ನ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy