ಸರಗೂರು: ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಣೇಗಾಲ ಗ್ರಾಮದಲ್ಲಿ ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೀರಿನ ತೊಂಬೆಯ ಕಳಪೆ ಕಾಮಗಾರಿಯಿಂದಾಗಿ ಜನರು ನೀರಿನ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ನಮ್ಮತುಮಕೂರು.ಕಾಂ ವರದಿ ಮಾಡಿದ್ದು, ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಮತ್ತು ಇಂಜಿನಿಯರ್ ಇದೀಗ ಕಾಮಗಾರಿ ಮತ್ತೆ ಆರಂಭಿಸಿದ್ದಾರೆ.
ಈ ಬಗ್ಗೆ ನಮ್ಮತುಮಕೂರು.ಕಾಂ ಜೊತೆಗೆ ಮಾತನಾಡಿದ ಗ್ರಾಮದ ಸುರೇಶ್ ಅವರು, ಸುಮಾರು ಒಂದು ವರ್ಷಗಳ ಹಿಂದೆ ಕಾಮಗಾರಿ ಆರಂಭವಾಗಿದ್ದರೂ, ಈವರೆಗೆ ಪೂರ್ಣಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮತುಮಕೂರು.ಕಾಂ ಪ್ರತಿನಿಧಿ ಚಂದ್ರ ಹಾದನೂರು ಅವರಿಗೆ ನಾವು ಮಾಹಿತಿ ನೀಡಿದ್ದು, ವರದಿಯ ಪ್ರಕಟಗೊಂಡ ಬೆನ್ನಲ್ಲೇ ಇದೀಗ ತೊಂಬೆ ಕಾಮಕಾರಿ ಆರಂಭಗೊಂಡಿದೆ ಎಂದು ತಿಳಿಸಿದರು.
ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಣೇಗಾಲ ಗ್ರಾಮದಲ್ಲಿ ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೀರಿನ ತೊಂಬೆ ಅತ್ಯಂತ ಕಳಪೆ ಗುಣಮಟ್ಟ ಹೊಂದಿದ್ದು, ಇದರಿಂದಾಗಿ ಗ್ರಾಮಸ್ಥರು ನೀರಿನ ಸಮಸ್ಯೆಯಿಂದ ಕಂಗೆಟ್ಟಿದ್ದರು. ಈ ಸಂಬಂಧ “ನೀರಿನ ತೊಂಬೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ: ನೀರಿಲ್ಲದೇ ಕಂಗೆಟ್ಟ ಗ್ರಾಮಸ್ಥರು” ಎಂಬ ಶೀರ್ಷಿಕೆಯಡಿಯಲ್ಲಿ ನಮ್ಮತುಮಕೂರು.ಕಾಂ ವರದಿ ಪ್ರಕಟಿಸಿತ್ತು. ವರದಿ ಪ್ರಕಟವಾದ ಬೆನ್ನಲ್ಲೇ ಇದೀಗ ಕಾಮಗಾರಿ ಮರು ಆರಂಭಗೊಂಡಿದೆ.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy