ತುಮಕೂರು: ಅಕಾಲಿಕ ಮಳೆಯಿಂದಾಗಿ ಮನೆ, ಬೆಳೆ ಹಾನಿಯಾಗಿದ್ದು, ಸಂತ್ರಸ್ತರಿಗೆ ಒಂದು ವಾರದಲ್ಲಿ ಪರಿಹಾರ ನೀಡಲು ಸರ್ಕಾರ ಕ್ರಮಕೈಗೊಂಡಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ನಗರದ ಅರಳೇಪೇಟೆ ಬಸವೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಮತ್ತು ಕುಂಭಾಭೀಷೇಕ ಮಹೋತ್ಸವದ ಅಂಗವಾಗಿ ನಡೆದ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ, ಬ್ರಮರಾಂಭ ಅಮ್ಮನವರ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತಿದ್ದರು.
ದೇಶದಲ್ಲಿ ಕೋವಿಡ್ 3ನೇ ಅಲೆಯ ಸೂಚನೆ ಕಂಡು ಬರುತ್ತಿದ್ದು, ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರಧಾನಿ ಕೆಲವು ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇದೇ ವೇಳೆ ಅವರು ತಿಳಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700