ತುಮಕೂರು: ಜಿಲ್ಲಾಡಳಿತದ ವತಿಯಿಂದ ಮೊದಲ ಬಾರಿಗೆ ಆಚರಿಸಲಾಗುತ್ತಿರುವ ತುಮಕೂರು ದಸರಾ ಭಾಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮವನ್ನು ಮಾಡಲಾಗುತ್ತಿದ್ದು, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ ಶಿವಕುಮಾರ ಸ್ವಾಮೀಜಿ ವೃತ್ತದಿಂದ ಮಹಾತ್ಮಗಾಂಧಿ ಕ್ರೀಡಾಂಗಣ ರಸ್ತೆಯಲ್ಲಿ ಅಕ್ಟೋಬರ್ 6ರ ಬೆಳಿಗ್ಗೆ 7 ರಿಂದ 9:30ಗಂಟೆಯವರೆಗೂ ರಂಗೋಲಿ ಸ್ಪರ್ಧೆ, ಬೆಳಿಗ್ಗೆ 10 ಗಂಟೆಗೆ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಹಗ್ಗ ಜಗ್ಗಾಟ, ಪಾಯಿಸನ್ ಬಾಕ್ಸ್ ಲೆಗ್ ಟೈಡ್ ರೇಸ್, ವಾಟರ್ ಬಾಲ್ ಅನ್ ಬಾಸ್ಕೆಟ್ ಸ್ಪರ್ಧೆ, ಸಂಜೆ 5:30 ಗಂಟೆಗೆ ಬಾಲಭವನ ಸಭಾಂಗಣದಲ್ಲಿ ತಾಯಿ ಮತ್ತು ಮಗುವಿನ ಸಾಂಪ್ರದಾಯಿಕ ಉಡುಗೆಗಳ ವೇಷಭೂಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಆಸಕ್ತರು ಅಕ್ಟೋಬರ್ 4 ರಂದು ಸಂಜೆ 5:30 ಗಂಟೆಯೊಳಗೆ ಜಿಲ್ಲಾ ಬಾಲಭವನ ಕಛೇರಿಯಲ್ಲಿ ತಮ್ಮ ಹೆಸರು ಮತ್ತು ಮಕ್ಕಳ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9901890079 / 08162956624ನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296