ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯುಪಿಎಸ್ ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿAಗ್ ಪಿ.ಒ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗದ ಪ್ರವರ್ಗ-1, 2ಎ, 3ಎ ಹಾಗೂ 3ಬಿಗೆ ಸೇರಿದ ಅರ್ಹ ವಿದ್ಯಾರ್ಥಿಗಳು ಜೂನ್ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದಾದರೊಂದು ಪದವಿ ಪಡೆದಿದ್ದು, ಕುಟುಂಬದ ವಾರ್ಷಿಕ ಆದಾಯ ಮಿತಿ 5 ಲಕ್ಷ ರೂ.ಗಳಾಗಿರಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕ, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://bcwd.Karnataka.gov.in ಅಥವಾ Sevasindhuservices.Karnataka.gov.in ಅಥವಾ ಸಹಾಯವಾಣಿ ಸಂಖ್ಯೆ 8050370006ನ್ನು ಸಂಪರ್ಕಿಸಬಹುದೆAದು ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW