ತುಮಕೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿ, ಪಿಯುಸಿ ಅಥವಾ ಸಮಾನಾಂತರ, ಸಾಮಾನ್ಯ ಪದವಿ, ಸಂಯೋಜಿತ ಉಭಯ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಹಾಗೂ ಪ್ರವರ್ಗ–1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 20ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770005, ದೂ.ವಾ.ಸಂ.1902 ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx