ತುಮಕೂರು: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಅರ್ಹ ವಿಶ್ವಕರ್ಮ ಸಮುದಾಯದವರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ, ಅರಿವು–ಶೈಕ್ಷಣಿಕ ನೇರಸಾಲ(ಹೊಸದು–ನವೀಕರಣ), ಗಂಗಾಕಲ್ಯಾಣ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್ ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ, ವಿದೇಶಿ ವ್ಯಾಸಂಗ ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಜಾಲತಾಣ https://www.kaushalkar.com ಹಾಗೂ ಉಳಿದ ಯೋಜನೆಗಳ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ತುಮಕೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜುಲೈ 2ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸ. 080–22374848/ 7899899039 ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ವಾ.ಸಂಖ್ಯೆ 0816–2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW