ವರ್ತೂರು ಸಂತೋಷ್ ಬಿಗ್ ಬಾಸ್ ಮನೆಗೆ ಹೋದ ಬಳಿಕ ಸಾಕಷ್ಟು ಏರುಪೇರುಗಳನ್ನು ಕಂಡಿದ್ದಾರೆ. ಬಿಗ್ ಬಾಸ್ ಗೆ ಎಂಟ್ರಿ ನೀಡಿದ್ದ ವರ್ತೂರ್ ಸಂತೋಷ್ ಅವರಿಗೆ ವಿವಾಹವಾಗಿರುವ ವಿಚಾರ ಬಳಿಕ ಬೆಳಕಿಗೆ ಬಂದಿತ್ತು. ತುಕಾಲಿ ಸಂತೋಷ್ ಜೊತೆಗೆ ಸ್ನೇಹಕ್ಕೆ ಹೆಸರಾಗಿದ್ದ ವರ್ತೂರ್ ಸಂತೋಷ್ ಬಳಿಕ ತನಿಷಾ ಬೆಂಕಿ ವಿಚಾರದಲ್ಲಿ ಸಾಕಷ್ಟು ಸದ್ದು ಮಾಡಿದ್ದರು.
ತನಿಷಾ ಹಾಗೂ ಸಂತೋಷ್ ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿತ್ತು. ಆದರೆ ತನಿಷಾ ಮತ್ತು ನಾನು ಒಳ್ಳೆಯ ಸ್ನೇಹಿತರು ಎಂದು ವರ್ತೂರು ಸಂತೋಷ್ ಹೇಳಿದ್ದರು.
ಇದೀಗ ವರ್ತೂರು ಸಂತೋಷ್ ಅವರೇ ಒಂದು ಸುದ್ದಿ ನೀಡಿದ್ದು, ಹೊಸ ಜೀವನ ಶುರು ಮಾಡಬೇಕು, ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದೇನೆ ಎಂದಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ್ದ ವರ್ತೂರು ಸಂತೋಷ್ ನಾನು ಡಿಪ್ರೇಷನ್ನಲ್ಲಿ ಇದ್ದಾಗ ಕಮ್ಬ್ಯಾಕ್ ಮಾಡೋಕೆ ಅವಳೇ ಕಾರಣ. ನನ್ನ ಜೀವನದ ಏರುಪೇರುಗಳನ್ನ ಅವಳು ನೋಡಿದ್ದಾಳೆ. ಜೊತೆಗಿದ್ದಾಳೆ. ನನ್ನ ಅಮ್ಮನ ನಂತರ ನಾನು ತುಂಬಾ ಪ್ರೀತಿಸೋ ಜೀವ ಅವಳು. ಇಬ್ಬರಿಗೂ ಮದುವೆಗೆ ಒಪ್ಪಿಗೆ ಇದೆ. ಪ್ರೀತಿ ಇದೆ ಎಂದು ಮುಚ್ಚಿಟ್ಟಿದ್ದ ಪ್ರೀತಿ ವಿಚಾರವನ್ನ ಬಹಿರಂಗ ಪಡೆಸಿದ್ದಾರೆ.
ವರ್ತೂರು ಸಂತೋಷ್ ನಿಜವಾಗಿಯೂ ಹೇಳಿದ್ರಾ ಅಥವಾ ಮದುವೆ, ಪ್ರೀತಿ ವಿಚಾರಗಳ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಹೇಳಿದ್ರ ಅನ್ನೋ ಅನುಮಾನಗಳು ಕೂಡ ಕೇಳಿ ಬಂದಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx