ಅಮೃತಸರ್ : ನನ್ನ ಸಿದ್ಧಾಂತ ಮತ್ತು ಬಿಜೆಪಿ ನಾಯಕ ವರುಣ್ ಗಾಂಧಿಯವರ ಸಿದ್ಧಾಂತಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಪಂಜಾಬಿನ ಹೋಶಿಯಾರ್ ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸಿದ್ಧಾಂತವು ಅವರ ಸಿದ್ಧಾಂತಕ್ಕೆ ಹೊಂದಿಕೆಯಾಗುವುದಿಲ್ಲ. ನಾನು ಆರ್ ಎಸ್ ಎಸ್ ಕಚೇರಿಗೆ ಹೋಗಲು ಸಾಧ್ಯವಿಲ್ಲ, ಅದಕ್ಕೂ ಮೊದಲು ನನ್ನ ತಲೆಯನ್ನು ಕತ್ತರಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ನನ್ನ ಕುಟುಂಬಕ್ಕೆ ಒಂದು ಸಿದ್ಧಾಂತವಿದೆ. ವರುಣ್ ಇನ್ನೊಂದನ್ನು ಅಳವಡಿಸಿಕೊಂಡಿದ್ದಾನೆ. ಅವನು ಅಳವಡಿಸಿಕೊಂಡ ಸಿದ್ಧಾಂತವನ್ನು ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


