ಮೈಸೂರು: ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರ ಗೆಲ್ಲಲು ಪಣ ತೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಳಿಗೆರೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ, “ನಾನು ಸಿಎಂ ಸ್ಥಾನದಲ್ಲಿ ಇರಬೇಕೋ ಬೇಡವೋ? ನಾನು ಸಿಎಂ ಸ್ಥಾನದಲ್ಲಿರಬೇಕು ಅಂದರೇ ವರುಣಾ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ” ಎಂದು ಮನವಿ ಮಾಡಿದರು.
“ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ. ವರುಣಾ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಕೊಡಿ. ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ. ಆಗ ನನ್ನನ್ನು ಯಾರೂ ಮುಟ್ಟಲ್ಲ” ಎಂದು ಹೇಳಿದರು.
“ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ ಸಾಮರ್ಥ್ಯ ಹೆಚ್ಚಿದೆ. ದುಡಿಯುವ ಅವಕಾಶವೂ ಹೆಚ್ಚಿದೆ. ಪುರುಷರ ಜೇಬಿಗೆ ಹಣ ಉಳಿತಾಯವಾಗಿದೆ. ಜನಸಾಮಾನ್ಯರ ಜೇಬಿಗೆ ಹಣ ಹಾಕಿ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಿಸಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯ ಕಾರ್ಯಕರ್ತರೂ, ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಾಲಾನುಭವಿಗಳಾಗಿದ್ದಾರೆ” ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296