ಈ ಚುನಾವಣೆಯು ತಂದೆಯ ಕೊನೆಯ ಚುನಾವಣೆಯಾಗಿದ್ದು, ವರುಣ ಕ್ಷೇತ್ರದಲ್ಲಿ ಅವರ ಗೆಲುವು ಖಚಿತವಾಗಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಮಳವಳ್ಳಿ ತಾಲ್ಲೂಕಿನ ನಾಗೇಗೌಡನದೊಡ್ಡಿ ಗೇಟ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರವನ್ನು ಸಿದ್ದರಾಮಯ್ಯನವರಿಗೆ ತ್ಯಾಗ ಮಾಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದರು.
ಕ್ಷೇತ್ರ ತ್ಯಾಗ ಎನ್ನುವ ಪ್ರಶ್ನೆ ಬರುವುದಿಲ್ಲ, ವರುಣ ಕ್ಷೇತ್ರ ಒಬ್ಬ ನಾಯಕರಿಗೆ ಮಾತ್ರ ಸೇರಿದ ಕ್ಷೇತ್ರವಲ್ಲ, ನಮ್ಮ ತಂದೆ ಅವರು ಕೊನೆಯ ಚುನಾವಣೆಗೆ ವರುಣ ಕ್ಷೇತ್ರದಲ್ಲೇ ನಿಂತು ಗೆಲ್ಲಬೇಕು ಎನ್ನುವುದು ಕಾರ್ಯಕರ್ತರಲ್ಲಿತ್ತು. ಹೈಕಮಾಂಡ್ ಕೂಡ ತಂದೆಯವರು ವರುಣದಲ್ಲಿ ನಿಂತರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದರು.
ಸಿದ್ದರಾಮಯ್ಯನವರು ವರುಣ ಕ್ಷೇತ್ರಕ್ಕೆ ಬರಲಿ ಯಾವುದೇ ರಿಸ್ಕ್ ಇಲ್ಲದೇ ನಾವು ಗೆಲ್ಲಿಸಿ ಕೊಡುತ್ತೇವೆ ಎಂದು ಕಾರ್ಯಕರ್ತರು ಮತ್ತು ನಾಯಕರ ಒತ್ತಾಯವಾಗಿತ್ತು ಎಂದು ಅವರು ಇದೇ ವೇಳೆ ಹೇಳಿದರು. ಈ ವೇಳೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ದಡದಪುರ ಶಿವಣ್ಣ ಜೊತೆಗಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


