ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯಗೆ ಕಾಂಗ್ರೆಸ್ ಟಿಕೆಟ್ ನೀಡುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರೋಕ್ಷ ಸುಳಿವು ನೀಡಿದ್ದಾರೆ.
ಮೇಘಳಾಪುರ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಯತೀಂದ್ರ ಸಿದ್ದರಾಮಯ್ಯ ನಿಮ್ಮ ಶಾಸಕರಾಗಿರುವುದು ಭಾಗ್ಯ. ಸಿದ್ದರಾಮಯ್ಯ ಅವರಿಗೆ ಎಲ್ಲಿ ಬೇಕಾದರೂ ಚುನಾವಣೆಗೆ ನಿಂತುಕೊಳ್ಳುವ ಶಕ್ತಿ ನೀಡಿದ್ದೀರಿ. ವರುಣಾ ಕ್ಷೇತ್ರದ ಜನರ ಸಹಾಯ ಮರೆಯಲು ಸಾಧ್ಯವಿಲ್ಲ ಎಂದರು.
ವರುಣಾ ಕ್ಷೇತ್ರದಿಂದ ಸದ್ಯ ಯತೀಂದ್ರ ಒಬ್ಬರೇ ಅರ್ಜಿ ಹಾಕಿದ್ದಾರೆ. ಈ ಬಾರಿ ವರುಣಾದಲ್ಲಿ ಯತೀಂದ್ರ ಸಿದ್ಧರಾಮಯ್ಯ ಅವರನ್ನು ಹೆಚ್ಚು ಮತ ನೀಡಿ ಗೆಲ್ಲಿಸಿ. ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


