ರಾಜ್ಯದಲ್ಲಿ ಈಗಾಗಲೇ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಕರಾವಳಿ ಭಾಗದಲ್ಲಿ ಮಳೆ ಇಳಿಕೆಯಾದರೂ ಪ್ರವಾಹ ಸ್ಥಿತಿ, ನದಿಗಳ ನೀರಿನ ಮಟ್ಟ ಕಡಿಮೆಯಾಗಿಲ್ಲ.
ಈ ನಡುವೆ ಹವಾಮಾನ ಇಲಾಖೆ ಮತ್ತೆ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಆದ್ದರಿಂದ ಜುಲೈ 13 ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ಜುಲೈ 12 ಮತ್ತು 13 ರಂದು ಕರಾವಳಿಗೆ ಆರೆಂಜ್ ಅಲರ್ಟ್ ಹಾಗೂ ಜುಲೈ 10 ಮತ್ತು 11 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿಯೂ ಸಾಧಾರಣದಿಂದ ಉತ್ತಮ ಮಳೆ ಸುರಿಯುವ ಸಾಧ್ಯತೆ ಹೆಚ್ಚಾಗಿದೆ. ಅದಿಲ್ಲದೇ ಹೋದರೂ ಬೆಂಗಳೂರಿನಲ್ಲಿ 3-4 ದಿನ ಕಾಲ ಮೋಡ ಕವಿದ ವಾತವರಣ ಮುಂದುವರಿಯಲಿದೆ. ರಾಜಧಾನಿಯಲ್ಲಿ ಗಾಳಿ ಜೊತೆಗೆ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 11, 12 ಹಾಗೂ 13 ರಂದು ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಸಹಿತ ಮಳೆ ಆಗಲಿದೆ.
ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಮತ್ತೆ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಆದ್ದರಿಂದ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಳೆದ 2-3 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉಡುಪಿ ಜಿಲ್ಲೆಯ ಜಲಾವೃತ ಭಾಗಗಳಲ್ಲಿ ಸಿಲುಕಿರುವ ಜನರನ್ನು NDRF ಮತ್ತು SDRF ರಕ್ಷಿಸುತ್ತಿದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಜನರು ಸುರಕ್ಷತೆಯಿಂದಿರಿ ಎಂದಿದೆ. ಮಳೆಯಿಂದ ತೋಟಕ್ಕೆ ನೀರು ನುಗ್ಗಿರುವ ವಿಡಿಯೋಗಳು ರಸ್ತೆ ಜಲವೃತವಾಗಿರುವ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA