ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು, ಕೊನೆಗೂ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾದಿಂದ ಸ್ಪರ್ಧಿಸುವುದು ಖಚಿತವಾಗಿದೆ.
ಈ ಮೊದಲು ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಆದರೆ ಹೈಕಮಾಂಡ್ ನಾಯಕರ ಸೂಚನೆ ಬೆನ್ನಲ್ಲೇ ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.
ಆದರೆ ಇದೀಗ ಕಾಂಗ್ರೆಸ್ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರ ಹೆಸರಿದ್ದು, ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


