ವಿಜಯಪುರ: ವಸಂತ ಕಾಲ ಬರಲಿ, ವಸಂತ ಬಂದಾಗಲೇ ಕಾಗೆ ಯಾವುದು ಕೋಗಿಲೆ ಯಾವುದು ಗೊತ್ತಾಗುವುದು ಎಂದು ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕಾಗೆ ಎಂದು ಟೀಕಿಸಿದರು.
ಬ್ರೋಕರ್ ಸ್ವಾಮಿ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಹರಿಹರ ಪೀಠದ ವಚನಾನಂದ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.
ಹರಿಹರ ಪೀಠದ ಸ್ವಾಮೀಜಿ ಬ್ರೋಕರ್ ಸ್ವಾಮಿ ಆಗಿದ್ದಾರೆ. ಹಣ ವಸೂಲಿ ಮಾಡೋದು, ಮಂತ್ರಿ ಮಾಡಿ ಎಂದು ಹಣ ಕೇಳೋ ಕೆಲಸ ಮಾಡುತ್ತಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರಿಂದ ಹರಿಹರ ಶ್ರೀಗಳು 10 ಕೋಟಿ ರೂ. ಹಣ ವಸೂಲಿ ಮಾಡಿದ್ದಾರೆ.
ಮಠದ ಹಣದ ವಿಚಾರದಲ್ಲಿ ಬಹಳ ಅವ್ಯವಹಾರ ಮಾಡಿದ್ದಾರೆ. ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಅವ್ಯವಹಾರದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು ಎಂದು ಯತ್ನಾಳ್ ಆರೋಪಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy