ತುಮಕೂರು: ವಸತಿ ನಿಲಯಗಳಿಗೆ ಪಾವಗಡ ತಹಶೀಲ್ದಾರ್ ಸುಜಾತ ದಿಢೀರ್ ಭೇಟಿ ನೀಡಿ ಹಾಸ್ಟೆಲ್ ಗಳ ಸ್ವಚ್ಛತೆ ಹಾಗೂ ಆಹಾರ ಗುಣಮಟ್ಟ ಪರಿಶೀಲನೆ ನಡೆಸಿದರು.
ಪಾವಗಡ ಪಟ್ಟಣದಲ್ಲಿರುವ ದೇವರಾಜು ಅರಸು ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳಿಗೆ ಭೇಟಿ ಮಾಡಿ ಅವರು, ಮಕ್ಕಳ ಹಾಜರಾತಿ ಪುಸ್ತಕ ಅಡುಗೆ ಮನೆಯ ಶುಚಿತ್ವ ಪರಿಶೀಲನೆ ನಡೆಸಿದರು.
ತಾವೇ ಹಾಸ್ಟೆಲ್ ಊಟ ಸೇವಿಸಿ, ಆಹಾರದ ಗುಣಮಟ್ಟ ಪರಿಶೀಲನೆ ಮಾಡಿ, ಹಾಸ್ಟೆಲ್ ಸ್ವಚ್ಚವಾಗಿ ಇಡುವಂತೆ ವಾರ್ಡ್ ಗೆ ಸೂಚನೆ ನೀಡಿದರು.
ಬಳಿಕ ಎಸ್ಸಿ-ಎಸ್ಟಿ ವಸತಿ ನಿಲಯಕ್ಕೂ ಭೇಟಿ ನೀಡಿದ ಅವರು, ಶೌಚಾಲಯ ಇಲ್ಲದೆ ಇರುವುದನ್ನು ಗಮನಿಸಿ ಕೂಡಲೇ ಶೌಚಾಲಯ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ಅಲ್ಲದೇ ಇಂದಿರಾ ಕ್ಯಾಂಟಿನ್ ಗೂ ಭೇಟಿ ನೀಡಿ, ಇಂದಿರಾ ಕ್ಯಾಂಟಿನ್ ಸ್ವಚ್ಛವಾಗಿಡುವಂತೆ ಸೂಚನೆ ನೀಡಿದರು. ತಹಶೀಲ್ದಾರ್ ಗೆ ಸ್ಥಳೀಯ ಅಧಿಕಾರಿಗಳ ಸಾಥ್ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA