ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಲಾಲ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ನೂತನ ಕಟ್ಟಡವು ಲೋಕಾರ್ಪಣೆಗೊಳ್ಳಲು ಸಜ್ಜಾಗಿದೆ.
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯ ಮುಖ್ಯ ಅಧಿಕಾರಿಗಳ ನೇತೃತ್ವದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ.ಜಿ.ಪರಮೇಶ್ವರ್ ಉಪಸ್ಥಿತಿಯಲ್ಲಿ ಶ್ರೀ ಇಂದಿರಾ ಗಾಂಧಿ ವಸತಿ ಶಾಲೆಯ ನೂತನ ಕಟ್ಟಡವು ಇಂದು ಉದ್ಘಾಟನೆಗೊಳ್ಳಲಿದೆ.
ಈ ಸಂದರ್ಭದಲ್ಲಿ ಗೃಹ ಸಚಿವ ಹಾಗೂ ತುಮಕೂರು ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ, ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ಜಿ ಪರಮೇಶ್ವರ್, ತುಮಕೂರು ಲೋಕಸಭಾ ಸದಸ್ಯರಾದ ಜಿ.ಎಸ್. ಬಸವರಾಜ್, ಸಚಿವರಾದ ಬಿ.ಸಿ.ನಾಗೇಶ್ ಮಾಧುಸ್ವಾಮಿ, ಜಿಲ್ಲಾಧಿಕಾರಿಗಳಾದ ವೈ.ಎಸ್. ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಕುಮಾರಿ, ಕೊರಟಗೆರೆ ತಹಸೀಲ್ದಾರ್ ನಾಹೀದಾ ಜಮ್ ಜಮ್, ಬೂದಗವಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ವಿನೋದ ನವೀನ್ ಕುಮಾರ್, ಉಪಾಧ್ಯಕ್ಷ ಅಖಂಡ ರಾದ್ಯ ಮತ್ತು ಗ್ರಾಮ ಪಂಚಾಯತಿಯ ಸರ್ವ ಸದಸ್ಯರು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿರುತ್ತಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz