ರೈಲ್ವೆ ಹಳಿಗಳಲ್ಲಿ ನಿಂತು ಮೊಬೈಲ್ ನಲ್ಲಿ ವೀಡಿಯೋ ಚಿತ್ರೀಕರಿಸುತ್ತಿದ್ದ ವೇಳೆ ಇಬ್ಬರು ಯುವಕರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ದೆಹಲಿಯ ಕಾಂತಿ ನಗರಲ್ಲಿ ನಡೆದಿದೆ.
ಮೃತರನ್ನು ಅಂತಿಮ ವರ್ಷದ ಬಿಟೆಕ್ ವಿದ್ಯಾರ್ಥಿ ವಂಶ್ ಶರ್ಮಾ (23) ಮತ್ತು ಸೇಲ್ಸ್ಮ್ಯಾನ್ ಮೋನು (20) ಎಂದು ಗುರುತಿಸಲಾಗಿದೆ. ಇಬ್ಬರೂ ಕಾಂತಿ ನಗರದ ನಿವಾಸಿಗಳಾಗಿದ್ದಾರೆ. ಯುವಕರು ಮೊಬೈಲ್ ನಲ್ಲಿ ಕಿರುಚಿತ್ರಗಳನ್ನು ಚಿತ್ರೀಕರಿಸುತ್ತಿರುವ ಹವ್ಯಾಸಹೊಂದಿದ್ದರು. ಆಗಾಗ ಲೈವ್ ವಿಡಿಯೊಗಳನ್ನು ಮಾಡಲು ರೈಲ್ವೆ ಹಳಿಗಳ ಬಳಿ ಬರುತ್ತಿದ್ದರು ಎಂಬುದು ವಿಷಯ ತಿಳಿದುಬಂದಿದೆ.
ಪೊಲೀಸರ ಪ್ರಕಾರ, ಫೆಬ್ರವರಿ 22 ರಂದು ಈ ಘಟನೆ ನಡೆದಿದ್ದು, ಹಳೆ ದೆಹಲಿ ರೈಲ್ವೆ ನಿಲ್ದಾಣದ ಶಹದಾರ ಪೊಲೀಸ್ ಠಾಣೆಗೆ ಸಂಜೆ 4.35 ರ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆ.. ರೈಲ್ವೆ ಹಳಿ ಮೇಲೆ ಅವರ ಮೊಬೈಲ್ ಗಳು ಕೂಡ ಪತ್ತೆಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


