ಗುಬ್ಬಿ : ತಾಲೂಕು ಕಚೇರಿ ಮುಂಭಾಗದಲ್ಲಿರುವ ಹೋಟೆಲ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಬೆಂಕಿಗಾಹುತಿಯಾಗಿದ ಘಟನೆ ಕಳೆದ ರಾತ್ರಿ ಹನ್ನೆರಡು ಮೂವತ್ತರ ಸಮಯದಲ್ಲಿ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡ ಪರಿಣಾಮ ದಿನಸಿ ಪದಾರ್ಥಗಳು, ಫರ್ನಿಚರ್ಸ್ ಗಳು , ಎರಡು ಫ್ರಿಡ್ಜ್ ,ಒಂದು ಡಿಯೋ ಬೈಕ್ ನಗದು ಹಣ ನಾಲ್ಕು ಸಾವಿರ ರೂಗಳು ಸೇರಿದಂತೆ ಸುಮಾರು 6 ರಿಂದ 7 ಲಕ್ಷದವರೆಗೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ಬೆಸ್ಕಾಂ ಕಚೇರಿಗೆ ಕರೆ ಮಾಡಿ ಮಾಹಿತಿ ನೀಡಿ ಒಂದು ಗಂಟೆಯಾದರೂ ಯಾವುದೇ ಬೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಬಾರದೇ ನಿರ್ಲಕ್ಷ್ಯ ವಹಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ಗ್ರಾಮಲೆಕ್ಕಿಗ ಮಾದೇವಿ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಮೇಲಾಧಿಕಾರಿ ಗಳಿಗೆ ವರದಿ ನೀಡುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಮೋಹನ್ ಕುಮಾರ್ ಹೋಟೆಲ್ ಮಾಲಿಕರ ಸಂಘದ ಸದಸ್ಯರಾದ ಈರಣ್ಣ ಸೇರಿದಂತೆ ಇನ್ನಿತರರು ಇದ್ದರು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಮೋಹನ್ ಕುಮಾರ್ ಹೋಟೆಲ್ ಮಾಲಿಕರ ಸಂಘದ ಸದಸ್ಯರಾದ ಈರಣ್ಣ ಸೇರಿದಂತೆ ಹಲವರು ಬೇಟಿ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB