nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    ಜಿಲ್ಲಾ ಸುದ್ದಿ June 23, 2026

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    By adminJune 23, 2026No Comments3 Mins Read
    veera ranga
    •  ರಾಘವೇಂದ್ರ ಅಡಿಗ ಎಚ್ಚೆನ್.

    ನಟಿ, ನಿರ್ಮಾಪಕಿ, ನಿರ್ದೇಶಕಿ ಸುಷ್ಮಾ ವೀರ್ ಈಗ ರಂಗಗೀತೆ ಪರಂಪರೆಗೆ ಹೊಸಲೇಪನ ಕೊಡಲು  ಮುಂದಾಗಿದ್ದಾರೆ. ಇತ್ತೀಚೆಗೆ ತಮ್ಮ ವೀರ ಕಥಾಕರ ಎಂಬ ಸಂಸ್ಥೆ ಮೂಲಕ “ವೀರ ರಂಗ ಸಂಭ್ರಮ K5” ಎಂಬ ಸಮಾರಂಭ ಆಯೋಜನೆ ಮಾಡಿದ್ದರು. ಈ ಸಮಾರಂಭದಲ್ಲಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡನ್ನು ಬಿಡುಗಡೆ ಮಾಡಲಾಯಿತು. ವರನಟ ಡಾ.ರಾಜಕುಮಾರ್ ಪುತ್ರಿ ಲಕ್ಷ್ಮೀ ಗೋವಿಂದರಾಜು ಹಾಗೂ ಅಳಿಯ ಎಸ್ ಎ ಗೋವಿಂದರಾಜು ಈ ಹಾಡನ್ನು ಅನಾವರಣ ಮಾಡಿದರು.

    ನಿರ್ದೇಶಕ ಪಿ.ಶೇಷಾದ್ರಿ, ನಟ ಸುಚೇಂದ್ರ ಪ್ರಸಾದ್, ಡಾ.ಸಿ.ಸೋಮಶೇಖರ್, ನಟ ಸುಂದರರಾಜ್, ಕೊಂಡಜ್ಜಿ ಮೋಹನ್, ಪ್ರಕಾಶ್ ರಾಘವಾಚಾರ್ ಹಾಗೂ ಡಾ.ಚಂದ್ರಶೇಖರ್ ಕಂಬಾರ ಅವರ ಪುತ್ರಿ ಜಯಶ್ರೀ ಸೇರಿದಂತೆ ಅನೇಕ ಗಣ್ಯರು ಹಾಗೂ ಗುಬ್ಬಿ ವೀರಣ್ಣ ಅವರ ಕುಟುಂಬದ ಅನೇಕ ಸದಸ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನ ಬಳಸಿಕೊಂಡಿರುವ ರಂಗಗೀತೆ ಇದ್ದಾಗಿದೆ. ಹಾಡಿನ ಲೋಕಾರ್ಪಣೆಯ ನಂತರ ಅತಿಥಿಗಳು ಹಾಗೂ ಸುಷ್ಮಾ ವೀರ್ ಮಾತನಾಡಿದರು.

    ಸುಷ್ಮಾ, ನಾವು ಎತ್ತಿ ಆಡಿಸಿದ ಮಗು. ನಮ್ಮ ಕುಟುಂಬಕ್ಕೂ ಅವರ ಕುಟುಂಬಕ್ಕೂ ನಾಲ್ಕು ತಲೆಮಾರುಗಳ ನಂಟಿದೆ. ಸುಷ್ಮಾ ಈಗ ಹೊಸಹೆಜ್ಜೆ ಇಟ್ಟಿದ್ದಾರೆ‌. ಅವರಿಗೆ ಶುಭವಾಗಲಿ ಎಂದು ಡಾ.ರಾಜಕುಮಾರ್ ಪುತ್ರಿ ಲಕ್ಷ್ಮೀ ಗೋವಿಂದರಾಜು ಹಾರೈಸಿದರು.

    ಸುಷ್ಮಾ ಅವರಿಗೆ ಹೇಗೆ ಬಂತು ಈ ಅಭಿನಯ. ತಾತಾ ಅವರಿಂದ? ತಾಯಿ ಅವರಿಂದ? ಅಲ್ಲ. ಅವರ ಪರಿಶ್ರಮದಿಂದ ಈ ಅಭಿನಯ ಬಂದಿದೆ.  ಧ್ವನಿ ಮಾತ್ರ ಅವರ ಕುಟುಂಬದಿಂದ ಬಂದಿರಬಹುದು. ಸುಷ್ಮಾ ಸಕಲಕಲಾವಲ್ಲಭೆ. ಈಗ ವೀರ ರಂಗ ಸಂಭ್ರಮದ ಮೂಲಕ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದಾರೆ ಅವರಿಗೆ ಒಳ್ಳೆಯದಾಗಲಿ ಎಂದರು ನಿರ್ದೇಶಕ ಪಿ‌.ಶೇಷಾದ್ರಿ.

    ಸುಷ್ಮಾ ಅವರನ್ನು ನಾನು ಅಮ್ಮು ಅಂತಲೇ ಕರೆಯುವುದು. ನಾವೆಲ್ಲಾ ಮಾಡಬೇಕಾದ ಕೆಲಸವನ್ನು ಸುಷ್ಮಾ ಮಾಡಿ ನಮ್ಮಗೆಲ್ಲಾ ಮಾದರಿಯಾಗಿದ್ದಾರೆ. ಕಾಲಗರ್ಭದಲ್ಲಿ ಕಳೆದು ಹೋಗುತ್ತಿದ್ದ ಈ ಹಾಡುಗಳನ್ನು ಸ್ಮೃತಿಗರ್ಭದಲ್ಲಿರುವಂತೆ ಮಾಡಿದ್ದಾರೆ ಎಂದು ನಟ ಸುಚೇಂದ್ರ ಪ್ರಸಾದ್ ತಿಳಿಸಿದರು.

    ಸುಷ್ಮಾ ಅವರ ಧ್ವನಿ ಕೇಳುತ್ತಿದ್ದರೆ, ಉಷಾ ಉತ್ತಪ್ಪ ಅವರ ಧ್ವನಿ ಕೇಳಿದ ಹಾಗೆ ಆಗುತ್ತದೆ. ಅವರ ಕಂಠದಿಂದ ಮತ್ತಷ್ಟು ಗೀತೆಗಳು ಬರಲಿ ಎಂದು ಡಾ.ಸಿ.ಸೋಮಶೇಖರ್ ಅವರು ಹೇಳಿದರು.

    ಸುಷ್ಮಾ ನನ್ನ ಮಗಳು ಇದ್ದ ಹಾಗೆ. ಬಾಲ್ಯದಿಂದಲೂ ನೋಡಿದ ಮಗು. ಅವರ ಈ ಬೆಳವಣಿಗೆ ನನಗೆ ಸಂತೋಷ ತಂದಿದೆ ಎಂದರು ನಟ ಸುಂದರರಾಜ್.

    ನಮ್ಮ ವೀರ ಕಥಾಕರ ಸಂಸ್ಥೆಯಿಂದ “ವೀರ ಸಂಭ್ರಮ K5” ಎಂಬ ಸಮಾರಂಭ ಆಯೋಜಿಸಿದ್ದೇವೆ. ಇದು ರಂಗಗೀತೆಗಳ ಹೊಸ ಅಲೆ ಅನಾವರಣ. ಈಗಿನ ಯುವಜನತೆಗೆ ರಂಗಗೀತೆಗಳನ್ನು‌ ಪರಿಚಯಿಸುವುದೇ “ವೀರ ಸಂಭ್ರಮ”ದ ಮೂಲ ಉದ್ದೇಶ. ಇನ್ನೂ, K5 ಅಂದರೆ, ಕರ್ನಾಟಕ, ಕನ್ನಡ, ಕಾರಂತ, ಕಾರ್ನಾಡ್ ಹಾಗೂ ಕಂಬಾರ ಎಂದು.  ಶಿವರಾಮ ಕಾರಂತ, ಗಿರೀಶ್ ಕಾರ್ನಾಡ್ ಹಾಗೂ ಚಂದ್ರಶೇಖರ್ ಕಂಬಾರರ ಹಾಡುಗಳನ್ನು ಜನರಿಗೆ ತಲುಪಿಸುವ,  ವಿಶೇಷವಾಗಿ ಯುವಜನತೆಗೆ ಮಟ್ಟಿಸುವ ಉದ್ದೇಶ. ಮುಂದಿನ ದಿನಗಳಲ್ಲಿ ಈ ಮೂವರು ದಿಗ್ಗಜರ ಕುರಿತು ದೊಡ್ದ ಸಮಾರಂಭ ಮಾಡುವ ಯೋಜನೆ ಕೂಡ ಇದೆ. ಇಂದು “ವೀರ ಸಂಭ್ರಮ”ದ ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬರರ ” ಮಾಯಾದ ಮನದ ಭಾರ” ಹಾಡನ್ನು ಬಿಡುಗಡೆ ಮಾಡಿದ್ದೇವೆ. ಜಂಕಾರ್ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ಟಿ.ಎಸ್ ನಾಗಾಭರಣ ನಿರ್ದೇಶನದ  “ನಾಗ ಮಂಡಲ” ಚಿತ್ರದಲ್ಲಿ ಬಳಸಿಕೊಳ್ಳಲಾಗಿತ್ತು. ಮೂಲ ಸ್ವರ ಸಂಯೋಜನೆ ಮಾಡಿದ್ದು ಸಿ.ಅಶ್ವಥ್ ಅವರು. ಈಗ ಈ‌ ಹಾಡನ್ನು ನಾನು ಹಾಡುವ ಪ್ರಯತ್ನ ಮಾಡಿದ್ದೇನೆ. ನಿರ್ದೇಶಕ ನಾಗಾಭರಣ ಅವರು ಕೂಡ ನನ್ನ ಗಾಯನದ ಬಗ್ಗೆ ಮೆಚ್ಚುಗೆ ಸೂಚಿಸಿರುವುದು ಸಂತೋಷವಾಗಿದೆ. ಮುಂದೆ ಕೂಡ ಅನೇಕ ರಂಗಗೀತೆಗಳು ನಮ್ಮ ಸಂಸ್ಥೆಯ ಮೂಲಕ ಲೋಕಾರ್ಪಣೆಯಾಗಲಿದೆ. ಸಮಾರಂಭಕ್ಕೆ ಆಗಮಿಸಿದ ಗಣ್ಯರಿಗೆ ಹಾಗೂ ಕುಟುಂಬ ಸದಸ್ಯರಿಗೆ ಧನ್ಯವಾದ ಎಂದರು ವೀರ ಕಥಾಕರ ಸಂಸ್ಥೆ ಸ್ಥಾಪಕಿ ಹಾಗೂ “ವೀರ ಸಂಭ್ರಮ K5” ಸಮಾರಂಭದ ಆಯೋಜಕಿ ಸುಷ್ಮಾ ವೀರ್.  ತಮ್ಮದೇ ಕಂಠಸಿರಿಯಲ್ಲಿ  ರಂಗಗೀತೆ ಹಾಡುವ ಮೂಲಕ ಸುಷ್ಮ ವೀರ್ ಸಮಾರಂಭಕ್ಕೆ ಚಾಲನೆ ನೀಡಿದ್ದು ವಿಶೇಷವಾಗಿತ್ತು. ಯುವ ಗಾಯಕಿಯರಾದ ಕಾವ್ಯ ಹಾಗೂ ಕವನ ಸಹ ಸುಷ್ಮಾ ಅವರ ಜೊತೆಗೆ ಗಾಯನಕ್ಕೆ ಜೊತೆಯಾದರು.

    ಗುಬ್ಬಿ ವೀರಣ್ಣ ಅವರ ಕುಟುಂಬ ಕಂಚಿನ ಕಂಠಕ್ಕೆ ಹೆಸರುವಾಸಿ. ಅದೇ  ಕಂಚಿನ ಕಂಠ ನಮ್ಮ ಸುಷ್ಮಾ ಅವರದು. ರಂಗಗೀತೆಗಳಿಗೆ ಹೇಳಿ ಮಾಡಿಸಿದ ಕಂಠ ಅವರದು ಎಂದು ಸಮಾರಂಭಕ್ಕೆ ಆಗಮಿಸಿದ್ದ ಎಲ್ಲಾ ಗಣ್ಯರು ಒಕ್ಕೊರಲ ಅಭಿಪ್ರಾಯ ಪಟ್ಟು, ಸುಷ್ಮಾ ಅವರ ಗಾಯನವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ತುಮಕೂರು: ಸಹಕಾರಿ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯವಾಗಿದ್ದು, ಆಡಳಿತ ಪಾರದರ್ಶಕವಾಗಿದ್ದಲ್ಲಿ ಆರ್ಥಿಕ ವಹಿವಾಟು ಸುಗಮವಾಗಿ ಸಹಕಾರಿಯು ಸುಸ್ಥಿರವಾಗಿ ಪ್ರಗತಿಪಥದಲ್ಲಿ ನಡೆಯಲು ಸಾಧ್ಯ…

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.