nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026
    Facebook Twitter Instagram
    ಟ್ರೆಂಡಿಂಗ್
    • ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    • ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
    • ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ
    • ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್
    • ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ
    • ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್
    • ತುಮಕೂರು: ಜು.12: ಕರ್ನಾಟಕ ವಿಕಾಸ ರಂಗದಿಂದ ಶಾಸ್ತ್ರೀಯ ಸಂಗೀತೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲರ ಏಳಿಗೆ ಬಯಸುವ ವೀರಶೈವ ಲಿಂಗಾಯತ ಧರ್ಮ ಶ್ರೇಷ್ಠ: ಈಶ್ವರ ಖಂಡ್ರೆ
    ರಾಜ್ಯ ಸುದ್ದಿ September 23, 2023

    ಎಲ್ಲರ ಏಳಿಗೆ ಬಯಸುವ ವೀರಶೈವ ಲಿಂಗಾಯತ ಧರ್ಮ ಶ್ರೇಷ್ಠ: ಈಶ್ವರ ಖಂಡ್ರೆ

    By adminSeptember 23, 2023No Comments1 Min Read
    bengaluru 4

    ಬೆಂಗಳೂರು: ಸರ್ವರಿಗೂ ಆಶ್ರಯ, ಅನ್ನ, ಅಕ್ಷರ ಕೊಟ್ಟ ಮಠಗಳ ಕಾರ್ಯ ಮಹತ್ವದ್ದು. ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸುವ ಬಸವಾದಿ ಪ್ರಮಥರ ಸತ್ಸಂಪ್ರದಾಯವನ್ನು ಅನೂಚಾನವಾಗಿ ಪಾಲಿಸುತ್ತಾ, ಸರ್ವರ ಏಳಿಗೆಗೆ ಶ್ರಮಿಸುತ್ತಿರುವ ವೀರಶೈವ, ಲಿಂಗಾಯಿತ ಧರ್ಮ ಶ್ರೇಷ್ಠವಾದ್ದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ.

    ಬೆಂಗಳೂರಿನಲ್ಲಿಂದು ಕರ್ನಾಟಕ ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘದ 3ನೇ ವಾರ್ಷಿಕೋತ್ಸವ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ನಾಗರಿಕ ಸೇವೆಗಳಿಗೆ ನೇಮಕಗೊಂಡ, ಪದೋನ್ನತಿ ಹೊಂದಿದ ಅಧಿಕಾರಿಗಳು, ವಿಶ್ವ ವಿದ್ಯಾಲಯಗಳಿಗೆ ಕುಲಪತಿಗಳಾಗಿ ನೇಮಕಗೊಂಡಿರುವ ಸಮುದಾಯದ ಗಣ್ಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಎಲ್ಲ, ಜಾತಿ, ಮತ, ಧರ್ಮದವರಿಗೆ ಅಕ್ಷರ, ಅನ್ನ, ಆಶ್ರಯ ನೀಡಿ ಜ್ಞಾನವಂತರನ್ನಾಗಿ ಮಾಡುತ್ತಿರುವ ಸಮಾಜದ ಮಠ ಮಾನ್ಯಗಳ ಕೊಡುಗೆ ಅಪಾರವಾದ್ದು ಎಂದು ಹೇಳಿದರು.
    ಸಮಾಜ ನಮಗೇನು ಕೊಟ್ಟಿದೆ ಎಂದು ಪ್ರಶ್ನಿಸುವ ಬದಲು, ಸಮಾಜಕ್ಕೆ ನಾವೇನು ಕೊಟ್ಟಿದ್ದೇವೆ ಎಂದು ಪ್ರಶ್ನಿಸಿಕೊಳ್ಳಿ, ಭವ್ಯ ಪರಂಪರೆಯ ಸಮಾಜದಿಂದ ಬಂದಿರುವ ನೀವು ನಿಮಗೆ ದೊರೆತಿರುವ ಅಧಿಕಾರವನ್ನು ಸಂವಿಧಾನಾತ್ಮಕವಾಗಿ ಚಲಾಯಿಸಿ, ರಾಜ್ಯದ ಅಭಿವೃದ್ಧಿಗೆ, ಬಡವರ ಕಲ್ಯಾಣಕ್ಕೆ ಶ್ರಮಿಸಿ ಎಂದು ಕರೆ ನೀಡಿದರು.

    ವೀರಶೈವ ಲಿಂಗಾಯತ ಸಮುದಾಯದಲ್ಲಿ ಪ್ರತಿಭಾವಂತರಿದ್ದರೂ, ಅವರಲ್ಲಿ ಅದಮ್ಯ ಚೇತನ, ಉತ್ಸಾಹವಿದ್ದರೂ ಆರ್ಥಿಕ ಸಂಕಷ್ಟದಿಂದ ಅವಕಾಶ ವಂಚಿತರಾಗುತ್ತಿದ್ದಾರೆ. ನಮ್ಮ ಸಮುದಾಯದ ಅರ್ಹರು ಎಲ್ಲ ಕ್ಷೇತ್ರದಲ್ಲೂ ಬೆಳೆಯಬೇಕು, ಬೆಳಗಬೇಕು. ಈ ನಿಟ್ಟಿನಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಲ್ಗೊಂಡು ಯಶಸ್ಸು ಪಡೆಯಲು ಪ್ರೋತ್ಸಾಹ ನೀಡಿ ಎಂದು ಮನವಿ ಮಾಡಿದರು.

    ನಮ್ಮ ಸಮುದಾಯದಲ್ಲೂ ಬಡವರಿದ್ದಾರೆ, ನಿರ್ಗತಿಕರಿದ್ದಾರೆ ಹೀಗಾಗಿ ಸಮುದಾಯದ ಎಲ್ಲ ಜಾತಿ, ಉಪಜಾತಿಗಳನ್ನೂ ಕೇಂದ್ರದ ಓಬಿಸಿ ಪಟ್ಟಿಯಲ್ಲಿ ಸೇರಿಸಿದಾಗ ಮಾತ್ರ ನ್ಯಾಯ ಸಿಗಲು ಸಾಧ್ಯ. ಇದಕ್ಕಾಗಿ ಪಕ್ಷಾತೀತವಾಗಿ ಸಮುದಾಯದ ಎಲ್ಲರೂ ಪ್ರಯತ್ನಿಸಬೇಕು ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿಯ ಆತಂಕ ಎದುರಾಗಿದ್ದರೂ, ತಕ್ಷಣವೇ ಬರಗಾಲ ಘೋಷಿಸಲು ಸಾಧ್ಯವಿಲ್ಲ.…

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ

    July 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.